ಗುರುವಾರ , ಜುಲೈ 29, 2021
20 °C

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದ ಶಾಸಕ: ಬಿಇಒ ಜಿ.ಬಿ. ಬಳಗಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೋಕಾಕ (ಬೆಳಗಾವಿ ಜಿಲ್ಲೆ): ‘ಶಾಸಕ ರಮೇಶ ಜಾರಕಿಹೊಳಿ ಅವರು ಪತ್ರಗಳನ್ನು ಬರೆದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಲ್ಲದೆ, ಮಾಸ್ಕ್‌ ಹಾಗೂ ಸ್ಯಾನಿಟೈಸರ್‌ಗಳನ್ನು ಕೂಡ ವಿತರಿಸಿ ಸಹಕರಿಸಿದ್ದಾರೆ’ ಎಂದು ಬಿಇಒ ಜಿ.ಬಿ. ಬಳಗಾರ ಹೇಳಿದರು.

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ವಿತರಿಸಲೆಂದು ಇಲ್ಲಿನ ತಮ್ಮ ಕಾರ್ಯಾಲಯದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರು ನೀಡಿದ ಮಾಸ್ಕ್‌ ಹಾಗೂ ಸ್ಯಾನಿಟೈಸರ್‌ಗಳನ್ನು ಶನಿವಾರ ಸ್ವೀಕರಿಸಿ ಅವರು ಮಾತನಾಡಿದರು.

‘ಶೈಕ್ಷಣಿಕ ವಲಯಕ್ಕೆ ಶಾಸಕರ ಕೊಡುಗೆ ಅಪಾರವಾಗಿದೆ. ಹೊಸದಾಗಿ ಆರು ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಮಂಜೂರು ಮಾಡಿಸಿ ಬಡ ಮಕ್ಕಳ ಕಲಿಕೆಗೆ ಅನುಕೂಲ ಮಾಡಿಕೊಟ್ಟಿದ್ದಾರೆ’ ಎಂದರು.

ಮುಖಂಡರಾದ ತುಕಾರಾಮ ಕಾಗಲ ಮತ್ತು ಮಡ್ಡೆಪ್ಪ ತೋಳಿನವರ, ಬಿಜೆಪಿ ನಗರ ಘಟಕದ ಅಧ್ಯಕ್ಷ ಭೀಮಶಿ ಭರಮಣ್ಣವರ, ಸುರೇಶ ಸನದಿ, ಕಾಂತು ಎತ್ತಿನಮನಿ, ಜೆ.ಆರ್. ಮಾಳಗಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.