ಬುಧವಾರ, ಜುಲೈ 28, 2021
20 °C

ಕೋವಿಡ್‌ ವಿರುದ್ಧ ಹೋರಾಟ | ಬೆಳಗಾವಿಯಲ್ಲಿ ಮಾಸ್ಕ್ ಜಾಗೃತಿ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲಾಡಳಿತದಿಂದ ನಗರದಲ್ಲಿ ಗುರುವಾರ ಮಾಸ್ಕ್ (ಮುಖಗವಸು) ದಿನ ಆಚರಿಸಲಾಯಿತು.

ಮಾಸ್ಕ್ ಧರಿಸುವ ಮೂಲಕ ಮಾರಕ ಕೊರೊನಾದಿಂದ ದೂರ ಇರಬಹುದು ಎಂದು ಜಾಗೃತಿ ಮೂಡಿಸಲಾಯಿತು.

ಅಶೋಕ ವೃತ್ತದಿಂದ ರಾಣಿ ಚನ್ನಮ್ಮ ವೃತ್ತದವರೆಗೆ ಜಾಗೃತಿ ಜಾಥಾ ನಡೆಯಿತು.

ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಮಾತನಾಡಿ, ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸೋಂಕಿನ ವಿರುದ್ಧ ನಾವೆಲ್ಲರೂ ಹೋರಾಡುವುದು ಅನಿವಾರ್ಯವಾಗಿದೆ. ಹೀಗಾಗಿ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಹಾಗೂ ಆಗಾಗ ಕೈತೊಳೆಯುವ ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು' ಎಂದು ಸಲಹೆ ನೀಡಿದರು.

ಸಾರ್ವಜನಿಕರಿಗೆ ಮಾಸ್ಕ್ ವಿತರಿಸಲಾಯಿತು.

ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ, ಕೋವಿಡ್-19 ವಿಶೇಷ ಅಧಿಕಾರಿ ರಾಜೇಂದ್ರ ಚೋಳನ್, ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್ ಕುಮಾರ್, ಎಸ್ಪಿ ಲಕ್ಷ್ಮಣ ನಿಂಬರಗಿ,  ನಗರಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ಡಿಎಚ್ಒ ಡಾ.ಶಶಿಕಾಂತ ಮುನ್ಯಾಳ, ಉಪವಿಭಾಗಾಧಿಕಾರಿ ಅಶೋಕ್, ಡಿಸಿಪಿ ಯಶೋದಾ ವಂಟಗೋಡಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು