ಸೋಮವಾರ, ಆಗಸ್ಟ್ 2, 2021
26 °C

ಆಶಾ ಕಾರ್ಯಕರ್ತೆಯರಿಗೆ ಗೌರವ ಸಮರ್ಪಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸೇವಾ ವಿಭಾಗದಿಂದ ಆಶಾ ಕಾರ್ಯಕರ್ತೆಯರಿಗೆ ‘ಧನ್ಯವಾದ ಅರ್ಪಣೆ’ ಕಾರ್ಯಕ್ರಮವನ್ನು ತಾಲ್ಲೂಕಿನ ಪಂತನಗರದ ಶಿವಾಲಯ, ಬೆಂಡಿಗೇರಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಹಿಂಡಲಗಾದ ಸಿದ್ಧಿವಿನಾಯಕ ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಳ್ಳಲಾಯಿತು.

ಅವರಿಗೆ ಮಾಸ್ಕ್, ಸ್ಯಾನಿಟೈಸರ್ ಹಾಗೂ ಕೊಡೆಗಳನ್ನು ವಿತರಿಸಲಾಯಿತು.

ಆರ್‌ಎಸ್‌ಎಸ್‌ ಸಹಪ್ರಾಂತ ಪ್ರಚಾರಕ ನರೇಂದ್ರ, ಆರ್‌ಎಸ್‌ಎಸ್‌ ವಿಭಾಗ ಕಾರ್ಯವಾಹ ಕೃಷ್ಣಾನಂದ ಕಾಮತ ಪಂತನಗರ, ಸಂಘದ ಪ್ರಮುಖರಾದ ಕೃಷ್ಣ ಭಟ್ ಮತ್ತು ಅಶೋಕ ಶಿಂತ್ರೆ ಬೆಂಡಿಗೇರಿಯಲ್ಲಿ, ಪ್ರಾಂತ ಕಾರ್ಯವಾಹ ರಾಘವೇಂದ್ರ ಕಾಗವಾಡ ಹಿಂಡಲಗಾದಲ್ಲಿ ಗೌರವಿಸಿದರು. ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ, ಮುಖಂಡ ಅಭಯ ಅವಲಕ್ಕಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.