ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಸರ್ಕಾರಿ ವೈದ್ಯರ ಪ್ರತಿಭಟನೆ

Last Updated 14 ಸೆಪ್ಟೆಂಬರ್ 2020, 11:28 IST
ಅಕ್ಷರ ಗಾತ್ರ

ಬೆಳಗಾವಿ: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.

‘ಸೆ.21ರವರೆಗೆ ಸರ್ಕಾರಕ್ಕೆ ಯಾವುದೇ ವರದಿ ನೀಡದೆ ಕಾರ್ಯನಿರ್ವಹಿಸುತ್ತೇವೆ’ ಎಂದು ತಿಳಿಸಿದರು.

‘ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಅನುಷ್ಠಾನ ವಿಷಯದಲ್ಲಿ ಸರ್ಕಾರಕ್ಕೆ ವರದಿ ನೀಡುವುದನ್ನು ಸ್ಥಗಿತಗೊಳಿಸುತ್ತೇವೆ. ಸೆ. 21ರಿಂದ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಸೇವೆಗಳನ್ನು ಸ್ಥಗಿತಗೊಳಿಸಿ ಹೋರಾಟ ಮುಂದುವರಿಸಲಾಗುವುದು. ಬಳಿಕವೂ ಸ್ಪಂದಿಸದಿದ್ದಲ್ಲಿ ಬೆಂಗಳೂರು ಚಲೋ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ’ ಎಂದು ಮಾಹಿತಿ ನೀಡಿದರು.

‘ಸರ್ಕಾರವು ವೈದ್ಯರನ್ನು ನಿರ್ಲಕ್ಷಿಸುತ್ತಿದೆ. ರೋಗ ತಡೆಯಿಂದ ಹಿಡಿದು ಚಿಕಿತ್ಸೆವರೆಗೂ ಎಲ್ಲ ಹಂತಗಳಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದ್ದರೂ ಆರೋಗ್ಯ ಇಲಾಖೆಯ ಬಗ್ಗೆ ಸರ್ಕಾರ ಕಾಳಜಿ ತೋರುತ್ತಿಲ್ಲ’ ಎಂದು ದೂರಿದರು.

ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಡಾ.ಸಂಜಯ ಡುಮ್ಮಗೋಳ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT