ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಕರಾಳ ದಿನಾಚರಣೆಗೆ ಅನುಮತಿಗೆ ಮನವಿ

Last Updated 28 ಅಕ್ಟೋಬರ್ 2020, 10:11 IST
ಅಕ್ಷರ ಗಾತ್ರ

ಬೆಳಗಾವಿ: ‘ನಗರದಲ್ಲಿ ನ.1ರಂದು ಕರಾಳ ದಿನಾಚರಣೆ ನಡೆಸಲು ಅನುಮತಿ ನೀಡಬೇಕು’ ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಬುಧವಾರ ಮನವಿ ಸಲ್ಲಿಸಿದರು.

ಅಧ್ಯಕ್ಷ ದೀಪಕ ದಳವಿ ನೇತೃತ್ವದಲ್ಲಿ ನಾಯಕರು ಪೊಲೀಸ್ ಅಧಿಕಾರಿಗಳನ್ನು ಭೇಟಿಯಾದರು. ‘ಕೋವಿಡ್ ನಿಯಮಗಳ ಪ್ರಕಾರವೇ ನಾವು ಕರಾಳ ದಿನಾಚರಣೆ ನಡೆಸಲು ಅವಕಾಶ ಮಾಡಿಕೊಡಬೇಕು’ ಎಂದು ಕೋರಿದರು.

ಮಾರ್ಕೆಟ್‌ ಎಸಿಪಿ ಸದಾಶಿವ ಕಟ್ಟಿಮನಿ, ಎಸಿಪಿ ಚಂದ್ರಪ್ಪ, ಸಿಪಿಐ ಜಾವೇದ್ ಮುಶಾಪುರೆ ಅವರೊಂದಿಗೆ ಚರ್ಚಿಸಿದರು. ‘ಮರಾಠಿ ಭಾಷಿಕರಾದ ನಮ್ಮ ಹಕ್ಕಿಗಾಗಿ ಸರ್ಕಾರದ ಗಮನಸೆಳೆಯಲು ಯಾವುದಾದರೊಂದು ವಿಧಾನದಲ್ಲಿ ಪ್ರತಿಭಟಿಸಲು ಅನುಮತಿ ನೀಡಬೇಕು’ ಎಂದು ಕೋರಿದರು.

ಮುಖಂಡರಾದ ಮನೋಹರ ಕಿಣೇಕರ, ಮಾಲೋಜಿರಾವ್ ಅಷ್ಟೇಕರ, ಪ್ರಕಾಶ ಮರಗಾಳೆ, ವಿಕಾಸ ಕಲಘಟಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT