ಬೆಳಗಾವಿ: ಗಡಿಭಾಗ ಬೆಳಗಾವಿಯಲ್ಲಿ ಸದಾ ನಾಡವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಎಂಇಎಸ್ ಮುಖಂಡ ಶುಭಂ ಶೆಳಕೆ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಗಡೀಪಾರು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

‘ಶೆಳಕೆ ವಿರುದ್ಧ ಕ್ರಮ ಕೈಗೊಳ್ಳಲು ವಿಳಂಬ ಮಾಡಿದರೆ, ಈ ವಿಚಾರವನ್ನು ಗೃಹ ಸಚಿವರು ಮತ್ತು ಪೊಲೀಸ್ ಮಹಾನಿರ್ದೇಶಕರ ಗಮನಕ್ಕೆ ತರುತ್ತೇವೆ. ಪೊಲೀಸರು ವಿರುದ್ಧ ರಾಜ್ಯದಾದ್ಯಂತ ಪ್ರತಿಭಟನೆ ಮಾಡುತ್ತೇವೆ’ ಎಂದು ಎಚ್ಚರಿಕೆ ಕೊಟ್ಟರು.

‘ಕನ್ನಡ ಹೋರಾಟಗಾರರಿಗೆ ರೌಡಿಶೀಟರ್ ಪಟ್ಟ ಕಟ್ಟಿರುವ ಪೊಲೀಸರು, ಶುಭಂ ಶೆಳಕೆ ರಕ್ಷಿಸುತ್ತಿರುವುದು ಏಕೆ?’ ಎಂದು ಪ್ರಶ್ನಿಸಿದರು.

ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ, ಸುರೇಶ ಗವನ್ನವರ, ಗಣೇಶ ರೋಕಡೆ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.