ಶನಿವಾರ, ನವೆಂಬರ್ 28, 2020
25 °C

‘ಎಂಇಎಸ್‌ನವರು ನಿಗಮ ವಿರೋಧಿಸಬಾರದು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಮರಾಠಾ ಅಭಿವೃದ್ಧಿ ನಿಗಮ ಸ್ಥಾಪಿಸುವುದನ್ನು ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ನಾಯಕರು ವಿರೋಧಿಸಿದರೆ, ಅವರು ಸಮುದಾಯಕ್ಕೆ ಅನ್ಯಾಯ ಮಾಡಿದಂತಾಗುತ್ತದೆ’ ಎಂದು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ ಬೆನಕೆ ಹೇಳಿದರು.

ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕ ಬಂದ್‍ಗೆ ಕರೆ ನೀಡಿದ ಸಂಘಟನೆಗಳಲ್ಲೇ ಮರಾಠಾ ಸಮುದಾಯದವರಿದ್ದಾರೆ. ಮರಾಠಾ–ಮರಾಠಿ ನಡುವಿನ ವ್ಯತ್ಯಾಸವನ್ನು ಆ ಸಂಘಟನೆಗಳು ತಿಳಿದುಕೊಳ್ಳಬೇಕು. ಕನ್ನಡ ಮಾತನಾಡುವ ಹಲವರು ಮರಾಠಾ ಸಮಾಜದಲ್ಲಿದ್ದಾರೆ’ ಎಂದರು.

‘ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸುತ್ತಿರುವುದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದೇವೆ. ಮರಾಠಾ ಸಮುದಾಯದಲ್ಲಿರುವ ಕನ್ನಡಿಗರಿಗೆ ಅನ್ಯಾಯ ಆಗಬಾರದು’ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು