ಬೆಳಗಾವಿ: ಕರ್ನಾಟಕ ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ಕರಾಳ ದಿನ ಆಚರಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಸೋಮವಾರ ಪ್ರತಿಭಟಿಸಿದ ಯುವ ಕರ್ನಾಟಕ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಕಾರರು ಮೆರವಣಿಗೆ ನಡೆಸಿ, ಎಂಇಎಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ರೌಡಿಶೀಟರ್ ಆಗಿರುವ ಎಂಇಎಸ್ನ ಶುಭಂ ಶೆಳಕೆ ವಿರುದ್ಧ ಮಾಳಮಾರುತಿ ಠಾಣೆ ಇನ್ಸ್ಪೆಕ್ಟರ್ ಜೆ.ಎಂ.ಕಾಲಿಮಿರ್ಚಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದು ತಪ್ಪು. ಈ ಬಗ್ಗೆ ತನಿಖೆ ಕೈಗೊಂಡು ಪೊಲೀಸ್ ಅಧಿಕಾರಿ ತಪ್ಪು ಮಾಡಿರುವುದು ಸಾಬೀತಾದರೆ ಸೇವೆಯಿಂದ ವಜಾಗೊಳಿಸಬೇಕು ಅಥವಾ ವರ್ಗಾವಣೆ ಮಾಡಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ಶಿವು ದೇವರವರ, ಶುಭಂ ಗಡಾದ ಇತರರಿದ್ದರು.