ಸೋಮವಾರ, ಅಕ್ಟೋಬರ್ 18, 2021
23 °C

‘ಕನ್ನಡ ಧ್ವಜ ವಿರೋಧಿಸಿ ಎಂಇಎಸ್ ಪ್ರತಿಭಟನೆ 18ರಂದು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ಮಹಾನಗರಪಾಲಿಕೆ ಎದುರು ಕನ್ನಡಪರ ಸಂಘಟನೆಗಳವರು ಸ್ಥಾಪಿಸಿರುವ ಕನ್ನಡ ಧ್ವಜ ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಯಿಂದ ಅ.18ರಂದು ಪ್ರತಿಭಟನೆ ನಡೆಸಲು ಮುಖಂಡರು ನಿರ್ಧರಿಸಿದ್ದಾರೆ.

ಇಲ್ಲಿ ಮಂಗಳವಾರ ಸಭೆ ನಡೆಸಿದ ಮುಖಂಡರು, ‘ಪಾಲಿಕೆ ಎದುರಿನ ಕನ್ನಡ ಧ್ವಜ ತೆಗೆಯಬೇಕು. ಇಲ್ಲವೇ ಭಗವಾಧ್ವಜ ಹಾರಿಸಲು ನಮಗೆ ಅವಕಾಶ ಕೊಡಬೇಕು’ ಎಂದು ಆಗ್ರಹಿಸಿದರು.

ಅಧ್ಯಕ್ಷ ದೀಪಕ ದಳವಿ ಮಾತನಾಡಿ, ‘ನಗರದಲ್ಲಿ ಮೂರು ಭಾಷೆಗಳಲ್ಲಿ (ಕನ್ನಡ, ಇಂಗ್ಲಿಷ್‌ ಮತ್ತು ಮರಾಠಿ) ನಾಮಫಲಕಗಳು ಇರುವಂತೆ ನೋಡಿಕೊಳ್ಳಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾಲಿಕೆ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ತಿಳಿಸಿದರು.

ಮುಖಂಡರಾದ ದೇವಪ್ಪ ಗುರವ, ಜಯರಾಂ ಮಿರಜಕರ, ರಾಜು ಮರವೆ, ವಿಕಾಸ ಕಲಘಟಗಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು