ಬುಧವಾರ, ಏಪ್ರಿಲ್ 14, 2021
31 °C

ಕನ್ನಡ ಧ್ವಜ ತೆರವಿಗೆ ಎಂಇಎಸ್ ಗಡುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಇಲ್ಲಿನ ಮಹಾನಗರ ಪಾಲಿಕೆ ಎದುರು ಕನ್ನಡ ಪರ ಸಂಘಟನೆಗಳು ಹಾರಿಸಿರುವ ಕನ್ನಡ ಧ್ವಜವನ್ನು ಮಾರ್ಚ್ 8ರ ಒಳಗೆ ತೆರವುಗೊಳಿಸಬೇಕು. ಇಲ್ಲವಾದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು’ ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಅಧ್ಯಕ್ಷ ದೀಪಕ ದಳವಿ ಎಚ್ಚರಿಕೆ ನೀಡಿದರು.

ಇಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಪಾಲಿಕೆ ಎದುರು ಕನ್ನಡ ಬಾವುಟವನ್ನು ಅಕ್ರಮವಾಗಿ ಹಾರಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ನಮ್ಮೊಂದಿಗೆ ಮಾತನಾಡಿದ ಜಿಲ್ಲಾಡಳಿತದ ಅಧಿಕಾರಿಗಳು, ಸಮಯ ಕೇಳಿದ್ದರು. ಆದರೆ ಇದುವರೆಗೂ ನಮಗೆ ನ್ಯಾಯ ಒದಗಿಸಿಲ್ಲ. ಮುಂದೆ ಚುನಾವಣೆ ಘೋಷಣೆಯಾದರೆ ನಮಗೆ ಯಾವುದೇ ರೀತಿಯ ಪ್ರತಿಭಟನೆಗೆ ಅವಕಾಶ ಸಿಗುವುದಿಲ್ಲ. ಆದ್ದರಿಂದ ಎಲ್ಲ ಮರಾಠಿ ಪರ ಸಂಘಟನೆಗಳ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಕನ್ನಡ ಧ್ವಜ ತೆರವುಗೊಳಿಸದಿದ್ದರೆ ಮಾರ್ಚ್‌ 8ರಂದು ಪ್ರತಿಭಟನೆ ಹಮ್ಮಿಕೊಂಡಿದ್ದೇವೆ’ ಎಂದು ತಿಳಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು