ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳೇಭಾವಿ: 6 ತಿಂಗಳ ಕೂಲಿ ಬಾಕಿ!

Last Updated 24 ಅಕ್ಟೋಬರ್ 2020, 12:11 IST
ಅಕ್ಷರ ಗಾತ್ರ

ಬೆಳಗಾವಿ: ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ನಿರ್ವಹಿಸಿದ ನಮಗೆ ಆರು ತಿಂಗಳ ಬಾಕಿ ವೇತನ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿ ತಾಲ್ಲೂಕಿನ ಸುಳೇಭಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಕೂಲಿ ಕಾರ್ಮಿಕರು ಶನಿವಾರ ಪ್ರತಿಭಟನೆ ನಡೆಸಿದರು.

ಕೆಲ ಕಾಲ ಕೆಲಸ ಸ್ಥಗಿತಗೊಳಿಸಿ, ಪಿಡಿಒ ಶ್ರೀದೇವಿ ಹಿರೇಮಠ ಹಾಗೂ ನರೇಗಾ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತ‍ಪಡಿಸಿದರು.

‘ನೇಕಾರಿಕೆಯಲ್ಲಿ ತೊಡಗಿದ್ದ ಅನೇಕರು ಕೋವಿಡ್ ಲಾಕ್‌ಡೌನ್‌ದಿಂದಾಗಿ ಕೆಲಸ ಕಳೆದುಕೊಂಡು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿ ಮಾಡುತ್ತಿದ್ದಾರೆ. ಅವರೂ ಸೇರಿದಂತೆ ನಮಗೆ ಆರು ತಿಂಗಳಿಂದ ಕೂಲಿ ಸಿಕ್ಕಿಲ್ಲ. ಇದರಿಂದಾಗಿ ಜೀವನ ನಡೆಸುವುದು ದುಸ್ತರವಾಗಿದೆ’ ಎಂದು ತಿಳಿಸಿದರು.

‘ಕೂಡಲೇ ಕೂಲಿ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದಲ್ಲಿ ಕೆಲಸವನ್ನು ಸಂಪೂರ್ಣ ಬಂದ್ ಮಾಡಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ನಾಗಪ್ಪ ಹುಡೇದ, ಬಾಳಕೃಷ್ಣ ನಿಂಗನಗೌಡ, ಲಕ್ಷ್ಮಣ ಅಮಾತಿ, ಭೀಮಶಿ ಕೌತಗಾರ, ಟೋಪಣ್ಣ ಪಂಕು, ಗೀತಾ ಮೂಕನವರ, ಸೇವಂತಾ ಭೈರಪ್ಪನವರ, ಸಕ್ಕುಬಾಯಿ ಧರ್ಮೋಜಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT