ಬೆಳಗಾವಿ: 'ನಾಯಕತ್ವ ಬದಲಾವಣೆ ವಿಷಯದಲ್ಲಿಹಾದಿ- ಬೀದಿಯಲ್ಲಿ ಮಾತನಾಡುವವರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನೊಂದಿದ್ದಾರೆ. ಆದ್ದರಿಂದಲೇ, ಹೈಕಮಾಂಡ್ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂಬ ಮಾತುಗಳನ್ನು ಆಡಿದ್ದಾರೆ' ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.

ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಪ್ರತಿ ದಿನ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡಿದರೆ ಆಡಳಿತ ಯಂತ್ರದ ಮೇಲೆ ಪರಿಣಾಮ ಬಿರುತ್ತದೆ. ಅಲ್ಲದೇ ಅದು ಮಕ್ಕಳ ಆಟವಾಗುತ್ತದೆ. ಹಾದಿ ಬೀದಿಯಲ್ಲಿ ಮಾತನಾಡುವುದು ಸರಿಯಲ್ಲ' ಎಂದರು.

'ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲಿ ನಡೆಯುತ್ತದೆ. ಯಾರೋ ದೆಹಲಿಗೆ ಹೋಗಿ ಬಂದರೆ ಮುಖ್ಯಮಂತ್ರಿ ಬದಲಾವಣೆಗೆ ಹೋಗಿದ್ದಾರೆ ಎನ್ನಲಾಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭದ ಕೆಲಸವಲ್ಲ' ಎಂದರು.

ಇದನ್ನೂ ಓದಿ:ಮುಖ್ಯಮಂತ್ರಿ ಬದಲಾವಣೆ ಚರ್ಚೆಯಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆ: ಸಚಿವ ಶೆಟ್ಟರ್

'ಯಡಿಯೂರಪ್ಪ ಅವರು ಹೇಳಿರುವುದರಲ್ಲಿ ತಪ್ಪಿಲ್ಲ. ಹೈಕಮಾಂಡ್ ಏನು ನಿರ್ಧಾರ ಮಾಡುತ್ತದೆಯೋ ಅದಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆಯೇ ಹೊರತು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿಲ್ಲ. ಬದಲಾವಣೆ ಬಗ್ಗೆ ಹೈ ಕಮಾಂಡ್ ಯಾವುದೇ ಸೂಚನೆ ನೀಡಿಲ್ಲ. ಈ ವಿಷಯವಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೂಡ ಸ್ಪಷ್ಟಪಡಿಸಿದ್ದಾರೆ' ಎಂದು ಪ್ರತಿಕ್ರಿಯಿಸಿದರು.

'ಶಾಸಕರು ಸಹಿ ಸಂಗ್ರಹ ಮಾಡುತ್ತಿರುವ ವಿಷಯ ನನಗೆ ತಿಳಿದಿಲ್ಲ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.