ಶುಕ್ರವಾರ, ಸೆಪ್ಟೆಂಬರ್ 20, 2019
29 °C

ಕೋಯ್ನಾದಿಂದ ಕೃಷ್ಣಾಗೆ ನೀರು: ಸಚಿವ ಡಿಕೆಶಿ ಸಭೆ 6ರಂದು

Published:
Updated:

ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಕುಡಿಯುವ ನೀರಿಗೆ ತೀವ್ರ ಕೊರತೆಯಾಗಿದ್ದು, ಪಕ್ಕದ ಮಹಾರಾಷ್ಟ್ರ ರಾಜ್ಯದಿಂದ ಕೃಷ್ಣಾ ಹಾಗೂ ಭೀಮಾ ನದಿಗೆ ನೀರು ಪಡೆಯುವ ಪ್ರಯತ್ನದ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಸೋಮವಾರ ನಗರದಲ್ಲಿ ಶಾಸಕರು ಹಾಗೂ ಸಂಸದರ ಸಭೆ ನಡೆಸಲಿದ್ದಾರೆ.

ಇಲ್ಲಿನ ನೀರಾವರಿ ನಿಗಮದ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಗೆ ಸಭೆ ನಿಗದಿಯಾಗಿದೆ. ಬೆಳಗಾವಿ ಸೇರಿದಂತೆ ವಿಜಯಪುರ ಜಿಲ್ಲೆಗಳ ಜನಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಮಾರು ಒಂದು ಗಂಟೆಯವರೆಗೆ ಸಭೆ ನಡೆಯುವ ನಿರೀಕ್ಷೆ ಇದೆ. ನಂತರ ಅವರು ಕುಂದಗೋಳ ಉಪಚುನಾವಣೆ ಪ್ರಚಾರಕ್ಕೆ ತೆರಳಲಿದ್ದಾರೆ.

ಒಪ್ಪಂದದ ಬಗ್ಗೆಯೂ ಚರ್ಚೆ:

ಕೃಷ್ಣಾ ತೀರದ ಜನರಿಗೆ ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ನೀರು ಪೂರೈಸಿದರೆ, ಮಹಾರಾಷ್ಟ್ರದ ಜತ್ತ ಹಾಗೂ ಸಾಂಗ್ಲಿ ಜನರಿಗೆ ಆಲಮಟ್ಟಿ ಜಲಾಶಯದಿಂದ ನೀರು ಪೂರೈಸಬೇಕು ಎನ್ನುವ ಒಪ್ಪಂದದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

 

Post Comments (+)