ಎಂಇಎಸ್ ಎಂಬ ನಾಯಿ ಬೊಗಳಿದರೆ ಕರ್ನಾಟಕಕ್ಕೆ ಏನೂ ಆಗುವುದಿಲ್ಲ: ಕಾರಜೋಳ

ಬೆಳಗಾವಿ: ಆನೆ ಹೋಗುವಾಗ ನಾಯಿ ಬೊಗಳಿದರೆ ಏನೂ ಆಗುವುದಿಲ್ಲ.
– ಕರ್ನಾಟಕ ರಾಜ್ಯೋತ್ಸವ ಬಹಿಷ್ಕರಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಯವರು ನಡೆಸಿದ ಕರಾಳ ದಿನಾಚರಣೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮೇಲಿನಂತೆ ಪ್ರತಿಕ್ರಿಯಿಸಿದರು.
ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ‘ಸಿಟ್ಟನ್ನು ಸಿಟ್ಟಿನಿಂದ ಶಮನ ಮಾಡಲಾಗದು. ಸರ್ಕಾರವು ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಒಟ್ಟಾಗಿ ತೆಗೆದುಕೊಂಡು ಹೋಗಲಿದೆ. ಮುಂದಿನ ದಿನಗಳಲ್ಲಿ ಎಂಇಎಸ್‍ಗೆ ಬುದ್ಧಿ ಕಲಿಸುತ್ತೇವೆ’ ಎಂದರು.
‘ರಾಜ್ಯದಲ್ಲಿ ಪ್ರತಿ ಪ್ರತಿ 50 ಕಿ.ಮೀ.ಗೆ ಭಾಷೆ ಬದಲಾಗುತ್ತದೆ. ಅದನ್ನು ನೆಪವಾಗಿ ಇಟ್ಟುಕೊಂಡು ಹೋರಾಟ ಮಾಡಬಾರದು. ಪಾಕಿಸ್ತಾನದ ಜೊತೆ ಕಚ್ಚಾಡಿದಂತೆ ಕರ್ನಾಟಕ–ಮಹಾರಾಷ್ಟ್ರದವರೂ ಆಡಬಾರದು. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಬೆಳಗಾವಿಯಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಕೆಲವು ಕಿಡಿಗೇಡಿಗಳು ತಮ್ಮ ಅಸ್ತಿತ್ವ ಕಾಪಾಡಿಕೊಳ್ಳುವುದಕ್ಕೋಸ್ಕರ ವಿವಾದ ಕೆಣಕುತ್ತಿರುತ್ತಾರೆ. ಕರಾಳ ದಿನಾಚರಣೆ ಮಾಡುತ್ತಾರೆ. ಅಂಥವರಿಗೆ ಬೆಲೆ ಕೊಡುವ ಅಗತ್ಯವಿಲ್ಲ’ ಎಂದು ಪ್ರತಿಕ್ರಿಯಿಸಿದರು.
‘ಬೆಳಗಾವಿ ಜಿಲ್ಲೆಯ ಒಬ್ಬರಿಗೆ ಮಾತ್ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟಿರುವುದಕ್ಕೆ ನನಗೂ ಅಸಮಾಧಾನವಿದೆ. ಇಲ್ಲಿಗೆ ಕನಿಷ್ಠ ಮೂರು ಪ್ರಶಸ್ತಿ ಸಿಗಬೇಕಿತ್ತು. ಮುಂದಿನ ದಿನಗಳಲ್ಲಿ ಇದನ್ನು ಸರಿಪಡಿಸುತ್ತೇವೆ’ ಎಂದು ಪ್ರತಿಕ್ರಿಯಿಸಿದರು.
ಇದನ್ನೂ ಓದಿ: ಎಂಇಎಸ್ ಮುಖಂಡನಿಂದ ವಿವಾದಿತ ಫೇಸ್‌ಬುಕ್ ಪೋಸ್ಟ್
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.