ಶನಿವಾರ, ಅಕ್ಟೋಬರ್ 16, 2021
29 °C

ಬಡಾಲ‌ ಅಂಕಲಗಿಗೆ ಸಚಿವ ಗೋವಿಂದ ಕಾರಜೋಳ ಭೇಟಿ: ₹35 ಲಕ್ಷ ಪರಿಹಾರ ಚೆಕ್ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ:  ಮನೆ ಗೋಡೆ ಕುಸಿದು 7 ಮಂದಿ ಸಾವಿಗೀಡಾದ ತಾಲ್ಲೂಕಿನ ಬಡಾಲ‌ ಅಂಕಲಗಿಗೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಭೇಟಿ ನೀಡಿದ್ದಾರೆ.

ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಪರಿಹಾರದಂತೆ ಒಟ್ಟು  ₹ 35 ಲಕ್ಷ ಪರಿಹಾರ ಚೆಕ್ ವಿತರಿಸಿದರು.

ಮನೆ‌ ಬಿದ್ದು ಏಳು ಮಂದಿ ಸಾವಿಗೀಡಾಗಿರುವುದು ನೋವಿನ ಸಂಗತಿ. ಆ ನಷ್ಟ ತುಂಬಿಕೊಡಲು ಆಗುವುದಿಲ್ಲ. ತಲಾ ₹ 5 ಲಕ್ಷದಂತೆ ಪರಿಹಾರ ನೀಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರೂ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ತಲಾ ₹ 2 ಲಕ್ಷ ಮಂಜೂರು ಮಾಡಿದ್ದಾರೆ ಎಂದರು.

ಇನ್ನು ಇಬ್ಬರು ಮಕ್ಕಳಿಗೆ ತಲಾ ₹ 1 ಲಕ್ಷವನ್ನು ಮಕ್ಕಳ ಕಲ್ಯಾಣ ನಿಧಿಯಿಂದ ನೀಡಲಾಗುವುದು. ಆ ಕುಟುಂಬದವರ ನೋವಿನೊಂದಿಗೆ ಇಡೀ ಸರ್ಕಾರ ಜೊತೆಗಿರಲಿದೆ ಎಂದರು.

ಇದೇವೇಳೆ, ದುಃಸ್ಥಿತಿಯಲ್ಲಿರುವ ಮನೆಗಳ ಸಮೀಕ್ಷೆ ನಡೆಸಿ, ಆ ಮನೆಗಳಲ್ಲಿ ವಾಸಿಸುತ್ತಿರುವವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇ‌ನೆ. ಸತ್ತ ಮೇಲೆ ಪರಿಹಾರ ಕೊಡುವುದಕ್ಕಿಂತ ಪ್ರಾಣ ಉಳಿಸಿಕೊಳ್ಳಲು ಆದ್ಯತೆ ನೀಡಬೇಕಾಗಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು