ಬೆಳಗಾವಿ: ರಾಷ್ಟ್ರದ ಅಭಿವೃದ್ಧಿಗೆ ಪೌರತ್ವ ತಿದ್ದುಪಡಿ ಕಾಯ್ದೆಯು ಪೂರಕವಾಗಿದೆ. ಈ ಕಾಯ್ದೆಯು ಯಾರ ಪೌರತ್ವವನ್ನೂ ಕಿತ್ತುಕೊಳ್ಳುವುದಿಲ್ಲ. ಇದು ಪೌರತ್ವ ನೀಡುವ ಕಾಯ್ದೆಯಾಗಿದೆ. ಎಲ್ಲ ಭಾರತೀಯರು ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಮನವಿ ಮಾಡಿಕೊಂಡರು.

ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಮಾತನಾಡಿದರು.
ಪೌರತ್ವ ಕಾಯ್ದೆ ಜಾರಿಯಿಂದ ಗಣರಾಜ್ಯೋತ್ಸವ ಮತ್ತಷ್ಟು ಅರ್ಥಪೂರ್ಣವಾಗುತ್ತದೆ ಎಂದರು.

ಬೆಳಗಾವಿ ನಮ್ಮದು

ಇತ್ತೀಚೆಗೆ ವಿನಾಕಾರಣ ಗಡಿ ವಿಷಯ ಕೆಣಕುವ ಪ್ರಯತ್ನ ನಡೆದಿದೆ. ಇಲ್ಲಿನ ಜನರು ಯಾವುದೇ ಪ್ರಚೋದನೆಗೆ ಒಳಗಾಗದೇ ಎಲ್ಲರೂ ಸೌಹಾರ್ದದಿಂದ ಇರಬೇಕು.

ಬೆಳಗಾವಿ ನಮ್ಮದು. ಗಡಿ ವಿವಾದ ಮುಗಿದ ಅಧ್ಯಾಯ. ಬೆಳಗಾವಿ ನಮ್ಮದು; ಕರ್ನಾಟಕಕ್ಕೆ ಸೇರಿದೆ ಎಂದು ಈಗಾಗಲೇ ಸಾರಿ ಸಾರಿ ಹೇಳಿದ್ದೇವೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.