ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಸು ಸಂಶೋಧನಾ ಸಂಸ್ಥೆ ಮುಚ್ಚುವುದಿಲ್ಲ: ಕೋಟ ಶ್ರೀನಿವಾಸ ಪೂಜಾರಿ

Last Updated 17 ಡಿಸೆಂಬರ್ 2021, 21:45 IST
ಅಕ್ಷರ ಗಾತ್ರ

ಬೆಳಗಾವಿ (ಸುವರ್ಣ ವಿಧಾನಸೌಧ): ಹಿಂದುಳಿದ ವರ್ಗಗಳು ಮತ್ತು ಜಾತಿಗಳ ಕುರಿತು ಸಂಶೋಧನೆಗಾಗಿ ಸ್ಥಾಪಿಸಿರುವ ದೇವರಾಜ ಅರಸು ಸಂಶೋಧನಾ ಸಂಸ್ಥೆಯನ್ನು ಮುಚ್ಚುವ ಪ್ರಸ್ತಾವ ಸರ್ಕಾರ ಮುಂದೆ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಶುಕ್ರವಾರ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್‌ ಪ್ರಶ್ನೆಗೆ ಉತ್ತರಿಸಿದ ಅವರು, ‘ಅರಸು ಸಂಶೋಧನಾ ಸಂಸ್ಥೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಈ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

‘ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಯೋಜನೆಗಳು ಕೋವಿಡ್‌ ಕಾರಣದಿಂದ ಎರಡು ವರ್ಷದಿಂದ ಕುಂಠಿತವಾಗಿವೆ. ನಾನು ಕೂಡ ಅರಸು ಜಾರಿಗೆ ತಂದ ಭೂಸುಧಾರಣಾ ಕಾಯ್ದೆಯಿಂದ ಎರಡು ಎಕರೆ ಜಮೀನು ಪಡೆದಿರುವವನು. ಅವರ ಬಗ್ಗೆ ಅಪಾರ ಗೌರವವಿದೆ’ ಎಂದು ಹೇಳಿದರು. ಹರಿಪ್ರಸಾದ್ ಮಾತನಾಡಿ, ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ದೊಡ್ಡ ಸಮುದಾಯಗಳು, ಜಾತಿಗಳಿಗೆ ನಿಗಮ ಮತ್ತು ಮಂಡಳಿಗಳನ್ನು ರಚಿಸಲಾಗಿದೆ. ಆದರೆ, ಹಿಂದುಳಿದ ವರ್ಗಗಳು, ಜಾತಿಗಳಿಗೆ ಸಂಬಂಧಿಸಿದ ಸಂಸ್ಥೆಗಳನ್ನು ಮುಚ್ಚುವ ಯತ್ನ ನಡೆದಿದೆ. ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೂ ಸರಿಯಾಗಿ ಅನುದಾನ ನೀಡುತ್ತಿಲ್ಲ. ಅಲ್ಲಿರುವ ಯೋಜನೆಗಳು ದಲ್ಲಾಳಿಗಳ ಅನುಕೂಲಕ್ಕೆ ಬಳಕೆಯಾಗುತ್ತಿವೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT