ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಳಸೂರ ಸೇತುವೆ ನಿರ್ಮಾಣಕ್ಕೆ ₹40 ಕೋಟಿ ಬಿಡುಗಡೆ: ಸಚಿವ ಸತೀಶ ಜಾರಕಿಹೊಳಿ

Published : 30 ಸೆಪ್ಟೆಂಬರ್ 2024, 15:59 IST
Last Updated : 30 ಸೆಪ್ಟೆಂಬರ್ 2024, 15:59 IST
ಫಾಲೋ ಮಾಡಿ
Comments

ಗೋಕಾಕ: ‘ಜತ್ತ– ಜಾಂಬೋಟಿ ಅಂತರರಾಜ್ಯ ಹೆದ್ದಾರಿ ಭಾಗವಾದ, ಇಲ್ಲಿನ ಲೋಳಸೂರ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗಾಗಲೇ ₹40 ಕೋಟಿ ಬಿಡುಗಡೆ ಮಾಡಿದೆ. ಶೀಘ್ರ ಕಾಮಗಾರಿ ಆರಂಭಿಸಲಾಗುವುದು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಘಟಪ್ರಭಾ ಪ್ರವಾಹದಲ್ಲಿ ಪದೇಪದೇ ಮುಳುಗಡೆಯಾಗುವ ಸೇತುವೆ ಹಾಗೂ ಹೊಸ ಸೇತುವೆಯ ನೀಲನಕ್ಷೆಯನ್ನು ಸೋಮವಾರ, ಪರಿಶೀಲಿಸಿ ಅವರು ಮಾತನಾಡಿದರು.

‘ಬಹಳ ಹಳೆಯದಾದ ಈ ಸೇತುವೆ ಪ್ರತಿ ಮಳೆಗಾಲದಲ್ಲೂ ಮುಳುಗುತ್ತದೆ. ಆಗ ಅಂತರರಾಜ್ಯ ವಾಹನ ಸಂಚಾರ ಬಂದ್‌ ಆಗುತ್ತದೆ. ಈ ಭಾಗದ ಜನರ ಓಡಾಟಕ್ಕೂ ಸಮಸ್ಯೆಯಾಗಿದೆ. ಎತ್ತರದ ಸೇತುವೆ ನಿರ್ಮಾಣದ ಕೂಗು ಹಲವು ವರ್ಷಗಳಿಂದ ಕೇಳಿ ಬರುತ್ತಲೇ ಇದೆ. ಈಗ ಅದಕ್ಕೆ ಕಾಲ ಕೂಡಿಬಂದಿದೆ. ಇನ್ನು ಆರೇ ತಿಂಗಳಲ್ಲಿ ಕಾಮಗಾರಿ ಪೂರ್ಣವಾಗಲಿದೆ’ ಎಂದರು.

ಲೋಕೋಪಯೋಗಿ, ಹೆಸ್ಕಾಂ, ಕಂದಾಯ ಇಲಾಖೆ ಅಧಿಕಾರಿಗಳು ಅವರ ಇಲಾಖೆಯ ಪಾತ್ರಗಳನ್ನು ವಿವರಿಸಿದರು. ಕಾಂಗ್ರೆಸ್‌ ಮುಖಂಡರೂ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT