ಬೆಳಗಾವಿ: ಪೊಲೀಸ್ ಇಲಾಖೆಯಿಂದ ಆಯೋಜಿಸಿದ ಹೆಲ್ಮೆಟ್ ಜಾಗೃತಿ ಕಾರ್ಯಕ್ರದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಹೆಲ್ಮೆಟ್ ಧರಿಸಿ ಬೈಕ್ ಸವಾರಿ ಮಾಡುವ ಮೂಲಕ ಗಮನ ಸೆಳೆದರು.
ಜಾಗೃತಿ ರ್‍ಯಾಲಿ ಜಿಲ್ಲಾ ಕ್ರೀಡಾಂಗಣದಿಂದ ಆರಂಭಗೊಂಡು ಕೃಷ್ಣದೇವರಾಯ ವೃತ್ತ, ರಾಣಿ ಚನ್ನಮ್ಮ ವೃತ್ತ, ಕೋರ್ಟ್ ರಸ್ತೆ ಮಾರ್ಗವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ತಲುಪಿ ಕೊನೆಗೊಂಡಿತು.
ಸಚಿವರ ಜತೆಗೆ ಶಾಸಕ ಆಸೀಫ್ ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ, ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಎಸ್ಪಿ ಡಾ.ಭೀಮಾಶಂಕರ ಗುಳೇದ ಪಾಲ್ಗೊಂಡರು.