ಬೆಳಗಾವಿ: ‘ನಾವು ಔತಣಕೂಟ ನಡೆಸುತ್ತಿರುವುದು ಇದೇ ಮೊದಲೇನಲ್ಲ. ಕಳೆದ 20 ತಿಂಗಳಲ್ಲಿ ಹತ್ತು ಬಾರಿ ಸೇರಿ ಚರ್ಚಿಸಿದ್ದೇವೆ. ಹೀಗಿರುವಾಗ ಈ ಸಭೆಗೆ ಮಹತ್ವ ನೀಡಬೇಕಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಗುರುವಾರ ರಾತ್ರಿ ಆಯೋಜಿಸಿದ್ದ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲವು ಸಚಿವರು, ಶಾಸಕರು ಭಾಗಿಯಾದ ಕುರಿತ ಪ್ರಶ್ನೆಗೆ, ಇಲ್ಲಿ ಶುಕ್ರವಾರ ಸುದ್ದಿಗಾರರಿಗೆ ಹೀಗೆ ಪ್ರತಿಕ್ರಿಯಿಸಿದರು.

‘ಮುಖ್ಯಮಂತ್ರಿ ನಮ್ಮ ಮನೆಗೆ ಬರುವುದು ಹೊಸತಲ್ಲ. ನಾವು ಅವರ ಮನೆಗೆ ಹೋಗುತ್ತೇವೆ. ಅವರೂ ನಮ್ಮ ಮನೆಗೆ ಬರುತ್ತಾರೆ. ಸಿ.ಎಂ ಜತೆಗೆ ಎಲ್ಲ ಸಚಿವರು ಮಾತನಾಡಬೇಕು ಅಂದಿದ್ದರು. ಹಾಗಾಗಿ ಹೊಸ ವರ್ಷದ ಸಂದರ್ಭದಲ್ಲಿ ಸೇರಿದ್ದೇವೆ. ಅಲ್ಲಿ ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸುಧಾರಿಸಿ, 2028ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ವಿಚಾರವಾಗಿ ಚರ್ಚಿಸಲಾಗಿದೆಯೇ ಹೊರತು; ಸಂಪುಟ ಪುನರ್ರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚಿಸಿಲ್ಲ’ ಎಂದರು.

‘ಸಭೆಯಲ್ಲಿ ಅಹಿಂದ ನಾಯಕರಷ್ಟೇ ಸೇರಿದ್ದೇಕೆ’ ಎಂಬ ಪ್ರಶ್ನೆಗೆ, ‘ತುರ್ತಾಗಿ ಸಭೆ ನಿಗದಿಯಾಯಿತು. ಹಾಗಾಗಿ ತ್ವರಿತವಾಗಿ ಲಭ್ಯವಿರುವ ಕೆಲವರು ಸೇರಿದೆವು. ಪ್ರವಾಸ ಮತ್ತಿತರ ಕಾರಣಕ್ಕೆ ಕೆಲವರಿಗೆ ಹಾಜರಾಗಲು ಸಾಧ್ಯವಿಲ್ಲ. ಹಾಗಾಗಿ ಇದಕ್ಕೆ ರಾಜಕೀಯ ಮಹತ್ವ ನೀಡಬೇಕಿಲ್ಲ’ ಎಂದು ತಿಳಿಸಿದರು.

‘ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತದೆಯೇ? ನೀವು ಆ ಸ್ಥಾನದ ಆಕಾಂಕ್ಷಿಯೇ’ ಎಂಬ ಪ್ರಶ್ನೆಗೆ ಉತ್ತರಿಸಿದ ಸತೀಶ, ‘ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮವಿದೆ. ಆದರೆ, ಆಯಾ ನಾಯಕನ ಸಾಮರ್ಥ್ಯ ಮತ್ತು ಅನಿವಾರ್ಯತೆಗೆ ಅನುಗುಣವಾಗಿ, ಕರ್ನಾಟಕ ಮಾತ್ರವಲ್ಲದೆ; ಬೇರೆ ರಾಜ್ಯಗಳಲ್ಲೂ ಕೆಲವೊಮ್ಮೆ ಒಬ್ಬರಿಗೆ ಎರಡು ಹುದ್ದೆ ಕೊಟ್ಟ ಉದಾಹರಣೆಗಳಿವೆ. ಯಾರಿಗೆ ಎಷ್ಟು ಹುದ್ದೆ ಕೊಡಬೇಕೆಂದು ಪಕ್ಷ ನಿರ್ಧರಿಸುತ್ತದೆ. ಈಗ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಬಗ್ಗೆ ಚರ್ಚೆಯೇ ಆಗಿಲ್ಲ. ಸದ್ಯ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಸಮಯ ಬಂದಾಗ ಆ ಬಗ್ಗೆ ಚರ್ಚೆ ಮಾಡೋಣ’ ಎಂದರು.

ಸಂಪುಟ ಪುನರ್ರಚನೆ ವಿಚಾರವಾಗಿ ಪ್ರತಿಕ್ರಿಯಿಸಿದ ಸತೀಶ, ‘ಅನೇಕ ನಾಯಕರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಈ ಬಗ್ಗೆ ಪಕ್ಷದ ಹೈಕಮಾಂಡ್ನವರು, ಕೆಪಿಸಿಸಿ ಅಧ್ಯಕ್ಷರು ಮತ್ತು ಮುಖ್ಯಮಂತ್ರಿ ನಿರ್ಣಯ ಕೈಗೊಳ್ಳುತ್ತಾರೆ. ಸದ್ಯಕ್ಕೆ ಅಂಥ ಯಾವುದೇ ಬೆಳವಣಿಗೆ ಇಲ್ಲ’ ಎಂದರು.

‘ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರವನ್ನು ಹಲವು ವರ್ಷಗಳಿಂದ ಹೆಚ್ಚಿಸಿರಲಿಲ್ಲ. ಈಗ ವಿವಿಧ ವಸ್ತುಗಳ ದರ ಹೆಚ್ಚಿದೆ. ಹಾಗಾಗಿ ಬಸ್ ಪ್ರಯಾಣ ದರ ಏರಿಸಲಾಗಿದೆ. ಮಹಿಳೆಯರಿಗೆ ಉಚಿತವಾಗಿ ಬಸ್ ಸೌಕರ್ಯ ಕಲ್ಪಿಸಿದಕ್ಕಾಗಿಗೇನೂ ಹೆಚ್ಚಿಸಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡಬೇಕು ಎಂಬ ಆಗ್ರಹ ಕೇಳಿಬರುತ್ತಿರುವ ಕುರಿತು ಪ್ರತಿಕ್ರಿಯಿಸಿ, ‘ಸಚಿನ್ ತಮ್ಮ ಡೆತ್ನೋಟ್ನಲ್ಲಿ ಸಚಿವರ ಆಪ್ತರ ಹೆಸರಷ್ಟೇ ಬರೆದಿದ್ದಾರೆ. ಇದಕ್ಕೆ ಪ್ರಿಯಾಂಕ್ ಖರ್ಗೆ ಏಕೆ ರಾಜೀನಾಮೆ ಕೊಡಬೇಕು’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.