ಮಂಗಳವಾರ, ಮೇ 18, 2021
30 °C

ಬೆಳಗಾವಿ: ಸಚಿವೆ ಶಶಿಕಲಾ ಜೊಲ್ಲೆಗೆ ಮಾತೃ ವಿಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರ ತಾಯಿ ಸೇವಂತಾ ಹರದಾರೆ (90) ಮಂಗಳವಾರ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೆಲ ದಿನಗಳಿಂದ ಮಹಾರಾಷ್ಟ್ರದ ಕೊಲ್ಹಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನ್ನ ಜೀವನದ ಪ್ರೇರಣಾ ಶಕ್ತಿ, ಪ್ರತಿ ಯಶಸ್ಸು, ಏಳು-ಬೀಳಿನಲ್ಲೂ ಸದಾ ನನ್ನೊಂದಿಗಿರುತ್ತಿದ್ದ ದಾರಿದೀಪ, ನನ್ನನ್ನು ರೂಪಿಸಿದ ಮಾತೃಶ್ರೀ ಅವರು ಇಂದು ನಮ್ಮೊಂದಿಗಿಲ್ಲ. ಜೀವ-ಜೀವನ ರೂಪಿಸಿ, ನನ್ನಮ್ಮ ತಿಳಿಸಿಕೊಟ್ಟ ಜೀವನದ ಮೌಲ್ಯಗಳು, ಅವರ ಮಾರ್ಗದರ್ಶನ, ನೆನಪು ಎಂದೆಂದಿಗೂ ನನ್ನ ಮನದಲ್ಲಿ ಚಿರಸ್ಥಾಯಿಯಾಗಿದೆ. ನನ್ನ ಜೀವನದ ಸ್ಫೂರ್ತಿಯಾಗಿದ್ದ ನನ್ನಮ್ಮ ಇನ್ನು ನೆನಪು ಮಾತ್ರ ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು