ಗುರುವಾರ , ಜೂನ್ 17, 2021
29 °C

ಮರಾಠಿಯಲ್ಲಿ ಮಾತನಾಡಿದ ಸಚಿವ ಶ್ರೀಮಂತ ಪಾಟೀಲ!

‌ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಥಣಿ: ತಾಲ್ಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಸಕ್ಕರೆ ಕಾರ್ಖಾನೆ ಶನಿವಾರ ನಡೆದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದ ಜವಳಿ ಸಚಿವ ಶ್ರೀಮಂತ ಪಾಟೀಲ ಮರಾಠಿಯಲ್ಲಿ ಮಾತನಾಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

‘ನಮ್ಮ ಭಾಗದಲ್ಲಿ ಸಕ್ಕರೆ ಕಾರ್ಖಾನೆ ನಿರ್ಮಾಣವಾಗುತ್ತಿರುವುದು ತುಂಬಾ ಖುಷಿಯಾಗಿದೆ. ಕಾರ್ಖಾನೆಯ ಶೇ 75 ರಷ್ಟು ಹುದ್ದೆಗಳನ್ನು ಸ್ಥಳೀಯರಿಗೆ ನೀಡಬೇಕು’ ಎಂದು ಮರಾಠಿಯಲ್ಲಿ ಮನವಿ ಮಾಡಿದ್ದರು.

ಈ ಸಕ್ಕರೆ ಕಾರ್ಖಾನೆಯ ನಿರ್ಮಾಣದಲ್ಲಿ ಬಂಡವಾಳ ಹೂಡಿರುವ ನೆರೆಯ ಮಹಾರಾಷ್ಟ್ರದ ಕೃಷಿ ಸಚಿವ ವಿಶ್ವಜೀತ ಕದಂ ತಮ್ಮ ಭಾಷಣ ಮುಗಿದ ನಂತರ ‘ಜೈ ಮಹಾರಾಷ್ಟ್ರ’ ಎಂದು ಕೂಗಿದ್ದರು. ಇದಕ್ಕೂ ನೆಟ್ಟಿಗರು ತೀವ್ರ ಆಕ್ಷೇಪ  ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ನೆಲದಲ್ಲಿ ನಿಂತು ‘ಜೈ ಮಹಾರಾಷ್ಟ್ರ’ ಎಂದು ಕೂಗಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. 

ಕಾರ್ಯಕ್ರಮದಲ್ಲಿ 2,500ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದು, ಯಾವುದೇ ಅಂತರ ಕಾಯ್ದುಕೊಂಡಿರಲಿಲ್ಲ. ಸಚಿವ ಶ್ರೀಮಂತ ಪಾಟೀಲ ಸೇರಿದಂತೆ ಬಹುತೇಕರು ಮಾಸ್ಕ್‌ ಕೂಡ ಧರಿಸಿರಲಿಲ್ಲ. ಕಾರ್ಯಕ್ರಮದ ಬ್ಯಾನರ್‌ನಲ್ಲಿ ಕನ್ನಡ ಬಳಸಿರಲಿಲ್ಲ, ಮರಾಠಿಯಲ್ಲಿಯೇ ಬರೆಯಲಾಗಿತ್ತು. ಇದು ಕೂಡ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಸಚಿವ ಶ್ರೀಮಂತ ಪಾಟೀಲ ಪ್ರತಿಕ್ರಿಯೆಗೆ ಲಭ್ಯವಾಗಲಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು