ಭಾನುವಾರ, ಸೆಪ್ಟೆಂಬರ್ 27, 2020
28 °C

ಕಾಗವಾಡ: ‘ಸಚಿವ ಶ್ರೀಮಂತ ಪಾಟೀಲ ಕ್ಷಮೆ ಯಾಚಿಸಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಮೋಳೆ: ‘ಕಾಗವಾಡ ತಾಲ್ಲೂಕಿನಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಮ್ಮನ್ನು ತರಾಟೆಗೆ ತೆಗೆದುಕೊಂಡ ನೆರೆ ಸಂತ್ರಸ್ತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಜವಳಿ ಸಚಿವ ಶ್ರೀಮಂತ ಪಾಟೀಲ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ಹೋರಾಟ ನಡೆಸಲಾಗುವುದು’ ಎಂದು ಆಮ್‌ಆದ್ಮಿ ಪಕ್ಷ ಕಾಗವಾಡ ಮತಕ್ಷೇತ್ರದ ಅಧ್ಯಕ್ಷ ಬಾಳಾಸಾಹೇಬ ರಾವ್‌ ತಿಳಿಸಿದ್ದಾರೆ.

‘ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಶಾಸಕನಾಗಿ, ಆ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿಯಿಂದ ಉಪ ಚುನಾವಣೆಯಲ್ಲಿ ಆರಿಸಿ ಬಂದ ಬಳಿಕವೂ ಅವರು ಕ್ಷೇತ್ರವನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಪ್ರವಾಹ ಸಂತ್ರಸ್ತರನ್ನು ಮರೆತಿದ್ದಾರೆ’ ಎಂದು ಟೀಕಿಸಿದ್ದಾರೆ.

‘ಮನೆ ಕಳೆದುಕೊಂಡವರಿಗೆ ಸೂರಿನ ವ್ಯವಸ್ಥೆ ಕಲ್ಪಿಸಲಾಗಿಲ್ಲ. ಸಚಿವರು ಅವರಿಗೆ ಬೇಕಾದವರಿಗೆ ಅನುಕೂಲ ಮಾಡಿಕೊಂಡಿದ್ದಾರೆ’ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು