ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಲಸೆ ಕಾರ್ಮಿಕರನ್ನು ಖುದ್ದಾಗಿ ಭೇಟಿ ಮಾಡಿದ ಸುರೇಶ ಅಂಗಡಿ

Last Updated 23 ಏಪ್ರಿಲ್ 2020, 13:39 IST
ಅಕ್ಷರ ಗಾತ್ರ

ಬೆಳಗಾವಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಸತಿನಿಲಯದಲ್ಲಿ ಆಶ್ರಯ ಪಡೆದಿರುವ ರಾಜಸ್ಥಾನ ಮತ್ತಿತರ ರಾಜ್ಯಗಳ ವಲಸೆ ಕಾರ್ಮಿಕರನ್ನು ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಗುರುವಾರ ಭೇಟಿ ಮಾಡಿದರು.

ಅವರ ಅಹವಾಲುಗಳನ್ನು ಆಲಿಸಿದ ಅವರು, ‘ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಲಾಕ್‌ಡೌನ್ ಅನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಆ ಕಾರಣಕ್ಕಾಗಿ ವಲಸೆ ಕಾರ್ಮಿಕರ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಅಯಾ ರಾಜ್ಯ ಹಾಗೂ ಜಿಲ್ಲೆಗಳಲ್ಲಿಯೇ ಅವರಿಗೆ ಊಟ, ವಸತಿ ಸೌಲಭ್ಯ ಒದಗಿಸಲಾಗಿದೆ. ಲಾಕ್‌ಡೌನ್ ಮುಗಿಯುವವರೆಗೆ ಅಧಿಕಾರಿಗಳ ಜತೆ ಸಹಕರಿಸಬೇಕು’ ಎಂದು ಹೇಳಿದರು.

‘ಕಾರ್ಮಿಕರು ಅನಿವಾರ್ಯವಾಗಿ ಆಶ್ರಯ ಪಡೆದುಕೊಂಡಿದ್ದು, ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಜೊತೆಗೆ ಅವರ ಆರೋಗ್ಯದ ಬಗ್ಗೆಯೂ ನಿಗಾ ವಹಿಸಬೇಕು’ ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶಾಸಕ ಅನಿಲ ಬೆನಕೆ, ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್ ಕೆ.ಎಚ್. ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT