ನಾಪತ್ತೆಯಾಗಿದ್ದವ ಶವವಾಗಿ ಪತ್ತೆ

7

ನಾಪತ್ತೆಯಾಗಿದ್ದವ ಶವವಾಗಿ ಪತ್ತೆ

Published:
Updated:

ಬೆಳಗಾವಿ: ಇಲ್ಲಿನ ಯಳ್ಳೂರ ರಸ್ತೆಯ ಅನ್ನಪೂರ್ಣೇಶ್ವರಿ ನಗರದ ರಾಹುಲ್‌ ಶರಣಪ್ಪ ದಿವಟಗಿ (27) ಮೃತದೇಹ ಮಹಾರಾಷ್ಟ್ರದ ತಿಲ್ಲಾರಿ ಘಾಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ಸೋಮವಾರ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆದರ್ಶನ ನಗರದ ರಾಮಕೃಷ್ಣ ಚೋಟಿವಾಲೆ ಬಂಧಿತ. ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ರಾಹುಲ್‌ ನಾಪತ್ತೆಯಾಗಿರುವ ಕುರಿತು ಕುಟುಂಬದವರು ಆ.20ರಂದು ಟಿಳಕವಾಡಿ ಠಾಣೆಗೆ ದೂರು ನೀಡಿದ್ದರು. ತನಿಖೆ ತೀವ್ರಗೊಳಿಸಿದ ಪೊಲೀಸರು, ರಾಮಕೃಷ್ಣ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ನಂತರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಶವವನ್ನು ಚೀಲದಲ್ಲಿ ತುಂಬಿ ಬಿಸಾಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.

ಘಟನೆಗೆ ಅನೈತಿಕ ಸಂಬಂಧ ಕಾರಣ ಎನ್ನಲಾಗುತ್ತಿದೆ. ಟಿಳಕವಾಡಿ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 

 

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !