ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿಕ್ಸರ್‌, ಸ್ಟೀಲ್‌ ಬಾಕ್ಸ್‌ ವಿತರಣೆ| ಹೆಬ್ಬಾಳಕರ ವಿರುದ್ಧ ದೂರು ಇಂದು

Last Updated 25 ಜನವರಿ 2023, 21:30 IST
ಅಕ್ಷರ ಗಾತ್ರ

ಬೆಳಗಾವಿ: ‘ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಬಹಿರಂಗವಾಗಿ ಮಿಕ್ಸರ್ ಹಾಗೂ ಸ್ಟೀಲ್‌ ಬಾಕ್ಸ್‌ಗಳನ್ನು ಮತದಾರರಿಗೆ ಹಂಚುತ್ತಿದ್ದಾರೆ. ಈ ಬಗ್ಗೆ ಜ.26ರಂದು ಬೆಂಗಳೂರಿನಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು’ ಎಂದು ವಿಧಾನ ಪರಿಷತ್ ಸದಸ್ಯ ಎನ್‌.ರವಿಕುಮಾರ ಹೇಳಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಮೇಶ ಜಾರಕಿಹೊಳಿ ಸೇರಿ ಮೂವರ ವಿರುದ್ಧ ಭ್ರಷ್ಟಾಚಾರ ಬಗ್ಗೆ ಡಿ.ಕೆ. ಶಿವಕುಮಾರ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ದೂರು ನೀಡಿದ್ದಾರೆ. ರಮೇಶ ಅವರು ₹6,000 ಹಂಚಿರುವ ಬಗ್ಗೆ ದಾಖಲೆ ಇದ್ದರೆ ಬಿಡುಗಡೆ ಮಾಡಲಿ’ ಎಂದು, ಮಿಕ್ಸರ್ ಹಂಚಿಕೆ ಬಗ್ಗೆ ವಿಡಿಯೊ ತೋರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT