ಎಂ.ಕೆ.ಹುಬ್ಬಳ್ಳಿ: ‘ಸಾರ್ವಜನಿಕರ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಬೇಕು. ಮೂಲಸೌಕರ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು’ ಎಂದು ಪಟ್ಟಣ ಪಂಚಾಯಿತಿ ಸದಸ್ಯರು ಆಗ್ರಹಿಸಿದರು.

ಸ್ಥಳೀಯ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಶನಿವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಚುನಾಯಿತ ಜನಪ್ರತಿನಿಧಿಗಳು, ‘ಪಟ್ಟಣದ ಗಟಾರುಗಳ ಸ್ವಚ್ಛತೆ ವಿಳಂಬವಾಗುತ್ತಿದೆ. ಬೀರಲಿಂಗೇಶ್ವರ ದೇವಸ್ಥಾನದ ಬಳಿಯ ಸಿಮೆಂಟ್ ಟ್ಯಾಂಕ್ ಶಿಥಿಲಗೊಂಡಿದ್ದು, ನೆಲಸಮಗೊಳಿಸಿ ಹೊಸದಾಗಿ ಟ್ಯಾಂಕ್ ಅಳವಡಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವಾರ್ಡ್ ನಂ.5ರ ರಸ್ತೆಯೊಂದರ ಬಳಿ ಬಿದ್ದ ಗುಂಡಿ ಸರಿಪಡಿಸಬೇಕು ಎಂದು ಆಗ್ರಹಿಸಿದರು. ನೀರಿನ ಸಮಸ್ಯೆ ಉದ್ಭವಿಸದಂತೆ ಪೈಪ್ ಲೈನ್ ಸೇರಿ ತಮ್ಮ ವಾರ್ಡ್ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಿರುವ ಮೂಲಸೌಕರ್ಯ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ಅಧಿಕಾರಿಗಳ ಗಮನಕ್ಕೆ ತಂದರು.

ಕಸ ಸಂಗ್ರಹಣೆಯನ್ನು ಎರಡು ದಿನಕ್ಕೊಮ್ಮೆ ಮಾಡಿ, ಚರಂಡಿಗಳ ಸ್ವಚ್ಛತಾ ಕೆಲಸಕ್ಕೆ ಹೆಚ್ಚಿನ ಸಿಬ್ಬಂದಿ ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ಮನವಿ ಸದಸ್ಯೆರೆಲ್ಲ ಮನವಿ ಮಾಡಿದರು. ವಿವಿಧ ಕಾಮಗಾರಿ ಮತ್ತು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

‘ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸಕಾಲದಲ್ಲಿ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು. ಅನುಮೋದನೆ ಹಂತದಲ್ಲಿರುವ ಕಾಮಗಾರಿಗಳನ್ನು ಆದಷ್ಟು ಬೇಗ ಕೈಗೊಂಡು ಪಟ್ಟಣದ ಅಭಿವೃದ್ಧಿಗೆ ಶ್ರಮಿಸಲಾಗುವುದು’ ಎಂದು ಅಧಿಕಾರಿಗಳು ಭರವಸೆ ನೀಡಿದರು.

ಪಟ್ಟಣದಲ್ಲಿ ವಿದ್ಯುತ್ ವ್ಯತ್ಯಯ ಹೆಚ್ಚಾಗಿದ್ದು, ತಕ್ಷಣವೇ ಸರಿಪಡಿಸುವಂತೆ ಹೆಸ್ಕಾಂ ಎಇಇ ಎಸ್.ಎಸ್. ಬಾಗಲಕೋಟ ಅವರಿಗೆ ಪಂಚಾಯಿತಿ ಅಧ್ಯಕ್ಷ ಸುರೇಶ ಮುತ್ನಾಳ ಸೂಚಿಸಿದರು. ಬಿ– ಖಾತೆಯಡಿ ಇರುವ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತು ಚರ್ಚಿಸಿದರು.

ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮೀ ನಾಗನೂರ, ಮುಖ್ಯಾಧಿಕಾರಿ ರವಿಶಂಕರ ಮಾಸ್ತಿಹೊಳಿಮಠ, ಕಿರಿಯ ಎಂಜಿನಿಯರ್ ಸುಭಾಷ ಚೌಗಲಾ, ಸದಸ್ಯರಾದ ದೇಮಪ್ಪ ಬಸರಗಿ, ದೊಡ್ಡಪ್ಪ ಗಣಾಚಾರಿ, ಪ್ರಕಾಶ ಗಿರಜಿಮನಿ, ಮಂಜುನಾಥ ಕಡಕೋಳ, ಸಾವಿತ್ರಿ ಹೊಣ್ಣನ್ನವರ, ಪ್ರಕಾಶ ಕೊಡ್ಲಿ, ಸುಶೀಲಾ ಗಣಾಚಾರಿ, ಸುಬಾನಿ ಅಗಸಿಬಾಗಿಲ, ಸಮೀರ ಪಟೇಲ್, ಮಂಗಲಾ ದೇಮಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-21-32030816

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.