ದಕ್ಷಿಣದಲ್ಲಿ ಅಭಯ ಪಾಟೀಲ ಪ‍್ರಚಾರ

ಶುಕ್ರವಾರ, ಏಪ್ರಿಲ್ 26, 2019
35 °C

ದಕ್ಷಿಣದಲ್ಲಿ ಅಭಯ ಪಾಟೀಲ ಪ‍್ರಚಾರ

Published:
Updated:
Prajavani

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಪರವಾಗಿ ದಕ್ಷಿಣ ಮತಕ್ಷೇತ್ರದಲ್ಲಿ ಶಾಸಕ ಅಭಯ ಪಾಟೀಲ ಭಾನುವಾರ ಮತ ಯಾಚಿಸಿದರು.

‘ಬೆಳಿಗ್ಗೆ 7ರಿಂದ 4ಸಾವಿರ ಕಾರ್ಯಕರ್ತರು ದಕ್ಷಿಣ ಕ್ಷೇತ್ರದಲ್ಲಿ 58ಸಾವಿರ ಮನೆಗಳಿಗೂ ತಲುಪಿ ಬಿಜೆಪಿ ಸರ್ಕಾರದ ಸಾಧನೆಗಳ ಕರಪತ್ರಗಳನ್ನು ಹಂಚಿದ್ದಾರೆ. 251 ಮತಗಟ್ಟೆಗಳಿದ್ದು ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿ 15 ಮಂದಿ ಸಂಚರಿಸಿ ಪ್ರಚಾರ ಮಾಡಿದ್ದಾರೆ. ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ತಿಳಿಸಿದ್ದಾರೆ’ ಎಂದು ಮಾಹಿತಿ ನೀಡಿದರು.

‘ದೇಶದಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅಲೆ ಇದೆ. ಈ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಗುವುದು ನಿಶ್ಚಿತ. ರಾಜ್ಯದಲ್ಲೂ ಉತ್ತಮ ಫಲಿತಾಂಶ ಬರಲಿದೆ. ಜಿಲ್ಲೆಯಲ್ಲಿ ಪಕ್ಷದವರು ಗೆಲ್ಲುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !