ಶುಕ್ರವಾರ, ಮೇ 20, 2022
26 °C

ಬೆಳಗಾವಿ: ಬಿಜೆಪಿ ಶಾಸಕರಿಂದ ಕರ್ಫ್ಯೂ ನಡುವೆಯೂ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಉತ್ತರ ಮತಕ್ಷೇತ್ರದ ಬಿಜೆಪಿ ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ಮುಖಂಡರು ಮತ್ತು ಅಭಿಮಾನಿಗಳು ಧರ್ಮವೀರ ಸಂಭಾಜಿ ಮಹಾರಾಜರ ಪಟ್ಟಾಭಿಷೇಕ ದಿನದ ಸ್ಮರಣಾ ಕಾರ್ಯಕ್ರಮವನ್ನು ಇಲ್ಲಿನ ಸಂಭಾಜಿ ವೃತ್ತದಲ್ಲಿ ವಾರಾಂತ್ಯ ಕರ್ಫ್ಯೂ ನಡುವೆಯೂ ಭಾನುವಾರ ನಡೆಸಿದ್ದಾರೆ.

ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದ್ದಾರೆ. ಜಲಾಭಿಷೇಕ ನೆರವೇರಿಸಿದ್ದಾರೆ. ಮಾಸ್ಕ್  ಧರಿಸದೆ ಒಂದೇ ಕಡೆ 20ಕ್ಕೂ ಹೆಚ್ಚು ಜನರು ಸೇರಿದ್ದರು. ಮಹಾಮಂಗಳರಾತಿ ನೆರವೇರಿಸಿದರು.

ಇದನ್ನೂ ಓದಿ: 

ನಗರಪಾಲಿಕೆ ಸದಸ್ಯ ಜಯತೀರ್ಥ ಸವದತ್ತಿ, ಮುಖಂಡರಾದ ಸುನಿಲ ಜಾಧವ, ನಿಶಾಂತ ಕುಡೆ, ಶ್ರೀನಾಥ ಪವಾರ, ಆದಿತ್ಯ ಪವಾರ, ಓಂಕಾರ ಮೋಹಿತೆ, ಸೌರಭ ಬಾಮನೆ ಮತ್ತಿತರರು ಪಾಲ್ಗೊಂಡಿದ್ದರು.

ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು