ಜೋಳಿಗೆ ಹಿಡಿದಾದರೂ ಹಣ ಸಂಗ್ರಹಿಸಿ ಕೊಡುವೆ: ಮಹೇಶ ಕುಮಠಳ್ಳಿ

ಅಥಣಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಹಲ್ಯಾಳ ಬಳಿ ಕೃಷ್ಣಾ ನದಿಯಲ್ಲಿ ಮುಳುಗಿ ಸಾವಿಗೀಡಾದ ನಾಲ್ವರು ಸಹೋದರರ ಕುಟುಂಬದವರಿಗೆ ಶಾಸಕ ಮಹೇಶ ಕುಮಠಳ್ಳಿ ಗುರುವಾರ ಸಾಂತ್ವನ ಹೇಳಿದರು.
‘ಸರ್ಕಾರದಿಂದ ಪರಿಹಾರ ಕೊಡಿಸುವುದಕ್ಕೆ ಎಲ್ಲ ರೀತಿಯ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ತಪ್ಪಿದರೆ ಜೋಳಿಗೆ ಹಿಡಿದು ಹಣ ಸಂಗ್ರಹಿಸಿಯಾದರೂ ಕೊಡುತ್ತೇನೆ’ ಎಂದು ಬಣಸೋಡೆ ಕುಟುಂಬದವರಿಗೆ ಭರವಸೆ ನೀಡಿದರು.
‘ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ನಾನು ಈ ಬಗ್ಗೆ ಈಗಾಗಲೇ ಚರ್ಚಿಸಿದ್ದೇವೆ. ವೈಯಕ್ತಿಕವಾಗಿಯೂ ಸಹಾಯ ಮಾಡುತ್ತೇನೆ’ ಎಂದು ತಿಳಿಸಿ ಧೈರ್ಯ ತುಂಬಿದರು.
ಇದೇ ವೇಳೆ, ಕುಟುಂಬದವರು ಪರಿಹಾರ ಕೋರಿ ತಹಶೀಲ್ದಾರ್ ದುಂಡಪ್ಪ ಕೊಮಾರ ಅವರಿಗೆ ಮನವಿ ಸಲ್ಲಿಸಿದರು.
ಗ್ರಾಮ ಪಂಚಾಯ್ತಿ ಅಧ್ಯಕ್ಷ ಎಂ.ಶೇಗುಣಸಿ. ಡಿವೈಎಸ್ಪಿ ಎಸ್.ವಿ. ಗಿರೀಶ, ಸಿಪಿಐ ಶಂಕರಗೌಡ ಬಸನಗೌಡ, ಯಲ್ಲಾಲಿಂಗ ಪಾಟೀಲ, ಸುರೇಶ ವಾಡೇದ, ಬಾಳಪ್ಪ ಬಾಗಿ, ಅಜಿತ್ ಶಿಂಧೆ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.