ಬುಧವಾರ, ನವೆಂಬರ್ 25, 2020
20 °C
ಜಿಲ್ಲಾಧಿಕಾರಿ ಜೊತೆ ಬಾಲಚಂದ್ರ ಚರ್ಚೆ

ಸಂತ್ರಸ್ತರಿಗೆ ವಸತಿ ವ್ಯವಸ್ಥೆ ಕಲ್ಪಿಸಿ-ಬಾಲಚಂದ್ರ ಜಾರಕಿಹೊಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೋಕಾಕ: ‘ಕಳೆದ ವರ್ಷದ ಪ್ರವಾಹ ಹಾಗೂ ಅತಿವೃಷ್ಟಿಯಿಂದ ಸಂತ್ರಸ್ತರಾದ ಕುಟುಂಬಗಳಿಗೆ 15 ದಿನಗಳೊಳಗೆ ವಸತಿ ಸೌಕರ್ಯ ಕಲ್ಪಿಸಿಕೊಡಬೇಕು’ ಎಂದು ಅರಭಾವಿ ಶಾಸಕರೂ ಆಗಿರುವ ಕೆಎಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಒತ್ತಾಯಿಸಿದರು.

ಇಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಭೇಟಿಯಾದ ಅವರು, ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ನೆರೆ ಸಂತ್ರಸ್ತರ ಬೇಡಿಕೆಗಳಿಗೆ ಸ್ಪಂದಿಸಿ ತಕ್ಷಣ ಪರಿಹಾರ ಕಂಡುಕೊಳ್ಳಬೇಕೆಂದು ಒತ್ತಾಯಿಸಿದರು.

‘2019ರ ಆಗಸ್ಟ್‌ ಮತ್ತು ಸೆಪ್ಟೆಂಬರ್‌ನಲ್ಲಿ ಪ್ರವಾಹ ಮತ್ತು ಮಳೆಯಿಂದಾಗಿ ಸಾವಿರಾರು ಮನೆಗಳು ಜಲಾವೃತಗೊಂಡಿದ್ದವು. ಇದರಲ್ಲಿ ಪರಿಹಾರಕ್ಕಾಗಿ ಫಲಾನುಭವಿಗಳ ಪಟ್ಟಿಯಲ್ಲಿ 1,283 ಮಂದಿಯ ಹೆಸರು ಸೇರಿಲ್ಲ. ತಾಂತ್ರಿಕ ಕಾರಣಗಳಿಂದ ಹೀಗಾಗಿದೆ ಎಂದು ಹೇಳಲಾಗುತ್ತಿದೆ. ಸಂತ್ರಸ್ತರ ಸಮಸ್ಯೆಗಳನ್ನು ಕೂಡಲೇ ಇತ್ಯರ್ಥಪಡಿಸಬೇಕು’ ಎಂದು ಕೋರಿದರು.

ಕೂಡಲೇ ವರದಿ ಸಲ್ಲಿಸಿ: ನೆರೆ ಸಂತ್ರಸ್ತರ ವಸತಿ ಸೌಲಭ್ಯಕ್ಕಾಗಿ ತಮ್ಮ ಗೃಹ ಕಚೇರಿ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ದೂರವಾಣಿ ಮೂಲಕ ಸಭೆ ನಡೆಸಿದ ಅವರು, ಕೂಡಲೇ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಸಂತ್ರಸ್ತರು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಅವರಿಗೆ ವಾಸಿಸಲು ಈಗಲೂ ವಸತಿ ಸೌಲಭ್ಯವಿಲ್ಲ. ನಿಜವಾದ ಸಂತ್ರಸ್ತರಿಗೇ ಸರ್ಕಾರದಿಂದ ಪರಿಹಾರ  ಧನ ಸಿಕ್ಕಿಲ್ಲ. ಈ ಸಂಬಂಧ ವಸತಿ ಸಚಿವ ವಿ. ಸೋಮಣ್ಣ ಮತ್ತು ಜಿಲ್ಲಾಧಿಕಾರಿಯನ್ನು ಎರಡೆರಡು ಬಾರಿ ಭೇಟಿ ಮಾಡಿ, ಜನರಿಗೆ ಅನ್ಯಾಯ ಸರಿಪಡಿಸಲು ಮನವಿ ಮಾಡಿಕೊಂಡಿದ್ದೇನೆ. ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು’ ಎಂದರು.

ಗೋಕಾಕ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ, ಮೂಡಲಗಿ ತಹಶೀಲ್ದಾರ್ ಡಿ.ಜೆ. ಮಹಾತ್, ತಾ.ಪಂ. ಇಒ ಬಸವರಾಜ ಹೆಗ್ಗನಾಯಿಕ, ಪಿಡಿಒಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು