ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿಥಿ ಶಿಕ್ಷಕರಿಗೆ ₹34.82 ಲಕ್ಷ ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Last Updated 7 ಮಾರ್ಚ್ 2022, 15:30 IST
ಅಕ್ಷರ ಗಾತ್ರ

ಗೋಕಾಕ: ‘ದೇಶದ ಭವಿಷ್ಯ ಬದಲಾಯಿಸುವ ಸಾಮರ್ಥ್ಯ ಶಿಕ್ಷಕರಿಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಾಧನೆಗೆ ಸಹಕಾರಿ ಆಗಬೇಕು’ ಎಂದು ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಇಲ್ಲಿನ ಎನ್ಎಸ್ಎಫ್ ಆವರಣದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ 197 ಅತಿಥಿ ಶಿಕ್ಷಕರಿಗೆ ವೈಯಕ್ತಿಕವಾಗಿ ₹ 34.82 ಲಕ್ಷ ಗೌರವವೇತನವನ್ನು ಭಾನುವಾರ ವಿತರಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳಿಗೆ ಉತ್ತಮ ಜ್ಞಾನಾರ್ಜನೆ ನೀಡುವ ಕೆಲಸವನ್ನು ಶಿಕ್ಷಕರು ಮಾಡಲಿ’ ಎಂದು ಆಶಿಸಿದರು.

‘ಮೂಡಲಗಿ ಶೈಕ್ಷಣಿಕ ವಲಯವು ಇತ್ತೀಚಿನ ವರ್ಷಗಳಲ್ಲಿ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿದೆ. ಇಲ್ಲಿ ಕಲಿತವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶೈಕ್ಷಣಿಕ ರಂಗದ ಸಮಗ್ರ ಬೆಳವಣಿಗೆಗೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿವೆ. ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು 15 ವರ್ಷಗಳಿಂದ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತ್ಯ ಕೊಡುತ್ತಿದ್ದೇನೆ’ ಎಂದರು.

ಮೂಡಲಗಿ ಬಿಇಒ ಅಜಿತ ಮನ್ನಿಕೇರಿ, ‘ಕೋವಿಡ್ ಸಂದರ್ಭದಲ್ಲಿ ಶಾಸಕರು ನಮ್ಮೆಲ್ಲ ಕುಂದುಕೊರತೆಗಳನ್ನು ನೀಗಿಸಿದ್ದಾರೆ’ ಎಂದರು.

ಎಂಬಿಬಿಎಸ್, ಎನ್ಐಟಿ ಮತ್ತು ಧಾರವಾಡ ಐಐಟಿಗೆ ಪ್ರವೇಶ ಪಡೆದ ಮೂಡಲಗಿ ವಲಯದ 25 ವಿದ್ಯಾರ್ಥಿಗಳನ್ನು ಸತ್ಕರಿಸಿದರು. ಶಾಸಕರು ವಲಯದವರು ಸತ್ಕರಿಸಿದರು.

ತಜ್ಞ ವೈದ್ಯ ಡಾ.ಆರ್.ಎಸ್. ಬೆಣಚಿನಮರಡಿ, ಘಟಪ್ರಭಾ ಸಿಪಿಐ ಶ್ರೀಶೈಲ ಬ್ಯಾಕೋಡ, ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT