ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಗವಾಡ | ವಿವಿಧ ರಸ್ತೆ ಕಾಮಗಾರಿಗೆ ಶಾಸಕ ಕಾಗೆ ಚಾಲನೆ

Published 26 ಜೂನ್ 2024, 15:55 IST
Last Updated 26 ಜೂನ್ 2024, 15:55 IST
ಅಕ್ಷರ ಗಾತ್ರ

ಕಾಗವಾಡ: ‘ಮತ ಕ್ಷೇತ್ರದಲ್ಲಿ ಇರುವ ಅಲ್ಪಸಂಖ್ಯಾತರ ಕಾಲೊನಿ ‌ಸೇರಿದಂತೆ ವಿವಿಧ ರೀತಿಯ ಅಭಿವೃದ್ಧಿ ಕಾರ್ಯಕ್ಕೆ ಸಚಿವ ಜಮೀರ ಅಹ್ಮದ್ ಅವರನ್ನು ಭೇಟಿ ಮಾಡಿ ₹25 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು ಕೊಡುವುದಾಗಿ ಭರವಸೆ ನೀಡಿದ್ದಾರೆ’ ಎಂದು ಶಾಸಕ ರಾಜು ಕಾಗೆ ಹೇಳಿದರು.

ಕಾಗವಾಡ ಮತಕ್ಷೇತ್ರದ ಉಗಾರ ಖುರ್ದ ಪುರಸಭೆ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಮಂಜೂರು ಆದ ಸುಮಾರು ₹1. 73ಕೋಟಿ ಅನುದಾನದಲ್ಲಿ ಪಟ್ಟಣದಲ್ಲಿ ವಿವಿಧ ವಾರ್ಡ್‌ಗಳಲ್ಲಿ ಮಂಜೂರಾದ 7 ರಸ್ತೆಗಳಿಗೆ ಭೂಮಿ ಪೂಜೆ ಸಲ್ಲಿಸಿ, ಮಾತನಾಡಿದ ಅವರು ಅನುದಾನ ಬಂದ ತಕ್ಷಣ ಮತ ಕ್ಷೇತ್ರದಲ್ಲಿ ಅವಶ್ಯಕತೆ ಇರುವ ಕಡೆ ರಸ್ತೆ,ಚರಂಡಿ ಸೇರಿದಂತೆ ವಿವಿಧ ಕಾಮಗಾರಿ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಮುಖಂಡರಾದ ಹಾರುಣ ಮುಲ್ಲಾ, ಸತೀಶ ಜಗತಾಪ, ಅಮರ ಜಗತಾಪ, ಬಸು ಸಾಂಗಾವೆ, ರಾಜು ಪೂಜಾರಿ, ಮಹಾದೇವ ವಡಗಾಂವಿ, ಮದನ ದೇಶಿಂಗೆ, ರೋಹನ್ ನಾಯಕ, ಅಶೋಕ ಕಾಂಬಳೆ, ಶಂಕರ ವಾಘಮೋಡೆ, ಸುರೇಶ ವಾಘಮೋಡೆ ಸೇರಿದಂತೆ ಅನೇಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT