ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

4 ಕಾಮಗಾರಿ ಮಂಜೂರಾತಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮನವಿ

Last Updated 26 ಫೆಬ್ರುವರಿ 2021, 11:40 IST
ಅಕ್ಷರ ಗಾತ್ರ

ಬೆಳಗಾವಿ: ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವು ಯೋಜನೆಗಳನ್ನು ಮಂಜೂರು ಮಾಡುವಂತೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರಿಗೆ ಈಚೆಗೆ ಮನವಿ ಸಲ್ಲಿಸಿದ್ದಾರೆ.

‘₹ 3.50 ಕೋಟಿ ವೆಚ್ಚದಲ್ಲಿ ಹಿಂಡಲಗಾ ವ್ಯಾಪ್ತಿಯ ಜಯನಗರ ನಾಲಾ ನಿರ್ಮಾಣ ಕಾಮಗಾರಿ ಮತ್ತು ₹ 1.50 ಕೋಟಿ ವೆಚ್ಚದಲ್ಲಿ ಸಿದ್ದೇಶ್ವರ ನಗರದ ರಜಾತ್ ಕಾಲೊನಿ ನಾಲಾ ನಿರ್ಮಾಣ ಕಾಮಗಾರಿಗಳನ್ನು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಳ್ಳುವಂತೆ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಬೇಕು’ ಎಂದು ವಿನಂತಿಸಿದ್ದಾರೆ.

‘ಗ್ರಾಮೀಣ ಕ್ಷೇತ್ರದ ವ್ಯಾಪ್ತಿಗೆ ಬರುವ ಹಲಗಾ ಮತ್ತು ಬಸ್ತವಾಡ ಗ್ರಾಮಗಳಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಸಮಸ್ಯೆ ಇದೆ. ಸುವರ್ಣ ವಿಧಾನಸೌಧಕ್ಕೆ ಹಿಡಕಲ್ ಡ್ಯಾಂನಿಂದ ನೀರು ಸರಬರಾಜು ಮಾಡಲಾಗುತ್ತಿದೆ. ಅದರ ಹತ್ತಿರದಲ್ಲೆ ಇರುವ ಈ ಎರಡು ಗ್ರಾಮಗಳ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಆದ್ದರಿಂದ ಈ ಎರಡು ಗ್ರಾಮಗಳಲ್ಲಿ ಜಲಜೀವನ ಮಿಷನ್‌ನಲ್ಲಿ ಕೊಳವೆಬಾವಿಗಳನ್ನು ಕೊರೆಸಬೇಕು. ಆ ನೀರನ್ನು ಸಂಗ್ರಹಿಸಿ ಜನರಿಗೆ ಪೂರೈಸಬೇಕು. ಈ ನಿಟ್ಟಿನಲ್ಲಿ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಬೇಕು’ ಎಂದು ಕೋರಿದರು.

‘ಹಿರೇಬಾಗೇವಾಡಿ ಗ್ರಾಮ ಪಂಚಾಯ್ತಿ ಕಟ್ಟಡವು ತುಂಬಾ ಹಳೆಯದಾಗಿದ್ದು, ಗೋಡೆಗಳು ಬಿರುಕು ಬಿಟ್ಟಿವೆ. ಚಾವಣಿಯೂ ಶಿಥಿಲಗೊಂಡಿದೆ. ಮಳೆಗಾಲದಲ್ಲಿ ಸೋರುತ್ತದೆ. ಆ ಕಟ್ಟಡ ನೆಲಸಮಗೊಳಿಸಿ ಅದೇ ಜಾಗದಲ್ಲಿ ಹೊಸದಾಗಿ ಕಟ್ಟಡ ನಿರ್ಮಿಸಲು ಗ್ರಾಮ ಪಂಚಾಯ್ತಿಯ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಸರ್ವಾನುಮತದಿಂದ ಠರಾವು ಪಾಸ್ ಮಾಡಲಾಗಿದೆ. ನಿರ್ಮಿಸಲು ಅಗತ್ಯ ಅನುದಾನ ಮಂಜೂರು ಮಾಡಬೇಕು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT