ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಕೇರ್ ಕೆಂದ್ರಕ್ಕೆ ಲಕ್ಷ್ಮಿ ಹೆಬ್ಬಾಳಕರ ಭೇಟಿ

Last Updated 3 ಜೂನ್ 2021, 17:17 IST
ಅಕ್ಷರ ಗಾತ್ರ

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕೋವಿಡ್ ಕೇರ್ ಸೆಂಟರ್ ಹಾಗೂ ಮಾದರಿ ಸಂಗ್ರಹ ಕೇಂದ್ರಳಿಗೆ ಗುರುವಾರ ಭೇಟಿ ನೀಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ಸೋಂಕಿತರಿಗೆ ಧೈರ್ಯ ತುಂಬಿದರು. ಹೋಂ ಐಸೊಲೇಷನ್‌ ಕಿಟ್‌ಗಳನ್ನು ವಿತರಿಸಿದರು.

ಮೋದಗಾ ಗ್ರಾಮದ ನಿರ್ಮಲ ನಗರದಲ್ಲಿರುವ ಕಾರ್ಡಿನಲ್ ಗ್ರೇಸಿಯಸ್ ಆಸ್ಪತ್ರೆಯ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿ ಸೋಂಕಿತರ ಆರೋಗ್ಯ ಬಗ್ಗೆ ವಿಚಾರಿಸಿ ಆತ್ಮಸ್ಥೈರ್ಯವನ್ನು ತುಂಬಿದರು. ಸೋಂಕಿತರಿಗೆ ಹಣ್ಣುಗಳನ್ನು ವಿತರಿಸಿ, ಸರಿಯಾದ ಚಿಕಿತ್ಸೆ ದೊರೆಯುತ್ತಿರುವ ಬಗ್ಗೆ ಮಾಹಿತಿ ಪಡೆದರು. ಅಗತ್ಯ ಔಷಧೋಪಚಾರ ಕೊರತೆ ಆಗದಂತೆ ನೋಡಿಕೊಳ್ಳಬೇಕ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮಾವಿನಕಟ್ಟಿ ಗ್ರಾಮದಲ್ಲಿ ಗಂಟಲು ದ್ರವ ಮಾದರಿ ಸಂಗ್ರಹಿಸುವ ಕೇಂದ್ರಕ್ಕೆ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯದ ಬಗ್ಗೆ ವಿಚಾರಿಸಿದರು. ತಮ್ಮ ಲಕ್ಷ್ಮಿತಾಯಿ ಪ್ರತಿಷ್ಠಾನದಿಂದ ಹೋಂ ಐಸೊಲೇಷನ್‌ ಕಿಟ್‌ಗಳನ್ನು ವಿತರಿಸಿದರು. ‘ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆ ಮಾಡಬೇಕು ಮತ್ತು ಕೋವಿಡ್ ಲಸಿಕೆ ಪೂರೈಸಬೇಕು’ ಎಂದರು.

ಇದೇ ವೇಳೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಆರೋಗ್ಯ ವಿಚಾರಿಸಿ ಕುಂದುಕೊರತೆಗಳನ್ನು ಆಲಿಸಿದರು. ಸರ್ಕಾರದಿಂದ ಸೌಲಭ್ಯಗಳನ್ನು ಕೊಡಿಸಿಕೊಡುವುದಾಗಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT