ಬುಧವಾರ, ಏಪ್ರಿಲ್ 21, 2021
24 °C

18 ಮಂದಿಗೆ ಪರಿಹಾರ ನಿಧಿಯಿಂದ ನೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ 18 ಜನರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಒದಗಿಸಿದ್ದಾರೆ.

ಆಸ್ಪತ್ರೆಯ ವೆಚ್ಚ ಭರಿಸುವ ಸಾಮರ್ಥ್ಯ ಇಲ್ಲದವರಿಗೆ ನೆರವಾಗಿದ್ದಾರೆ. ಅವರವರ ಬ್ಯಾಂಕ್‌ ಖಾತೆಗಳಿಗೆ ಹಣ ಜಮಾ ಮಾಡಿಸಲಾಗಿದೆ. ಈ ಕುರಿತ ದಾಖಲೆಗಳನ್ನು ಶಾಸಕರು ಗುರುವಾರ ಸಂಬಂಧಿಸಿದವರಿಗೆ ನೀಡಿದರು.

‘ಆರೋಗ್ಯವೇ ಭಾಗ್ಯ. ಹೀಗಾಗಿ, ಆ ಕಡೆ ಹೆಚ್ಚಿನ ಕಾಳಜಿ ವಹಿಸಬೇಕು. ಧೃತಿಗೆಡಬೇಕಾಗಿಲ್ಲ. ಗ್ರಾಮೀಣ ಕ್ಷೇತ್ರದಲ್ಲಿ ಅನಾರೋಗ್ಯಪೀಡಿತರಾದವರಿಗೆ ನನ್ನಿಂದ ಸಾಧ್ಯವಾದ ಮಟ್ಟಿಗೆ ನೆರವು ಒದಗಿಸುತ್ತಿದ್ದೇನೆ’ ಎಂದರು.

ಮುಖಂಡರಾದ ಯುವರಾಜ ಕದಂ, ನಾಗೇಶ ದೇಸಾಯಿ, ಬಾಗಣ್ಣ ನರೋಟಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.