ಬೆಳಗಾವಿ: ತಾಲ್ಲೂಕಿನ ಯಳ್ಳೂರು ಬಳಿಯ ರಾಜಹಂಸಗಢ ಕೋಟೆಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ನಿರ್ಮಾಣದ ಕಾರ್ಯವನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಬುಧವಾರ ವೀಕ್ಷಿಸಿದರು.

ಹಲವು ವರ್ಷಗಳ ಬೇಡಿಕೆಯಾಗಿದ್ದ ಶಿವಾಜಿ ಮಹಾರಾಜರ ಪ್ರತಿಮೆ ನಿರ್ಮಾಣಕ್ಕೆ ಇತ್ತೀಚೆಗೆ ಲಕ್ಷ್ಮಿ ಅವರು ಚಾಲನೆ ನೀಡಿದ್ದರು. ಇದರ ನಿರ್ಮಾಣಕ್ಕಾಗಿ ಹಿಂದಿನ ಕಾಂಗ್ರೆಸ್ ಸರ್ಕಾರವು ₹ 50 ಲಕ್ಷ ಅನುದಾನ ನೀಡಿತ್ತು. ಕೋಟೆಯ ಸಮಗ್ರ ಅಭಿವೃದ್ಧಿಗಾಗಿ ಹಿಂದಿನ ಸಮ್ಮಿಶ್ರ ಸರ್ಕಾರವು ₹ 5 ಕೋಟಿ ನೀಡಿತ್ತು. ಈಗಿನ ಸರ್ಕಾರವು ₹ 3 ಕೋಟಿ ನೀಡಿದೆ. ಇವೆಲ್ಲ ಅನುದಾನದಿಂದ ರಾಜಹಂಸಗಢದ ಅಭಿವೃದ್ಧಿ ಕಾಮಗಾರಿ ಭರದಿಂದ ನಡೆಯುತ್ತಿದೆ.

ಕಾಮಗಾರಿಯನ್ನು ವೀಕ್ಷಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ಕಾಮಗಾರಿ ಉತ್ತಮ ರೀತಿಯಲ್ಲಿ ನಡೆಯುತ್ತಿರುವುದಕ್ಕೆ ತೃಪ್ತಿ ವ್ಯಕ್ತಪಡಿಸಿದರು. ಕೆಲವು ಸಲಹೆ ಸೂಚನೆಗಳನ್ನು ನೀಡಿದರು.

ಮೃಣಾಲ ಹೆಬ್ಬಾಳಕರ, ಯುವರಾಜ ಕದಂ ಸೇರಿದಂತೆ ಹಲವಾರು ಜನರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.