ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಯೋಧರೆಲ್ಲರಿಗೂ ವಿಮೆ: ಮನವಿ

Last Updated 20 ಮೇ 2020, 14:43 IST
ಅಕ್ಷರ ಗಾತ್ರ

ಬೆಳಗಾವಿ: ‘ಮಾರಕ ಕೊರೊನಾ ವಿರುದ್ಧದ ಹೋರಾಟದಲ್ಲಿ ಹಗಲಿರುಳೆನ್ನದೆ, ಪ್ರಾಣವನ್ನು ಪಣಕ್ಕಿಟ್ಟು ಕಾರ್ಯನಿರ್ವಹಿಸುತ್ತಿರುವ ಎಲ್ಲ ಇಲಾಖೆಗಳ ಕೊರೊನಾ ಯೋಧರಿಗೆ ಜೀವ ವಿಮೆಯನ್ನು ವಿಸ್ತರಿಸಬೇಕು’ ಎನ್ನುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

‘ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದ ಮಹಿಳಾ ಉದ್ಯೋಗಿಗಳು, ಸ್ವಯಂ ಉದ್ಯೋಗಿಗಳು, ಕರಕುಶಲ ಕಾರ್ಮಿಕರಿಗೆ ಸಹಾಯ ಧನ ನೀಡಬೇಕು. ಸಾಂಕ್ರಾಮಿಕ ರೋಗವನ್ನು ತಡೆಗಟ್ಟವ ಸಲುವಾಗಿ ನಿರಂತರವಾಗಿ ಶ್ರಮಿಸುತ್ತಿರುವ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ವೈದ್ಯಕೀಯ ವಿಮೆ ಯೋಜನೆಯನ್ನು ಒದಗಿಸಬೇಕು’ ಎಂದು ಕೋರಿದರು.

‘ಈ ನಿಟ್ಟಿನಲ್ಲಿ ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು’ ಎಂದು ಶಾಸಕರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT