ಬುಧವಾರ, ಜನವರಿ 27, 2021
22 °C

‘ಕಾಮಗಾರಿ ಗುಣಮಟ್ಟದಲ್ಲಿ ರಾಜಿ ಇಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ರಸ್ತೆ ಸೇರಿದಂತೆ ಯಾವುದೇ ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಎಲ್ಲವೂ ಸಮರ್ಪಕವಾಗಿ ನಡೆಯಬೇಕು’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಗುತ್ತಿಗೆದಾರರಿಗೆ ಸೂಚಿಸಿದರು.

ಗ್ರಾಮೀಣ ಕ್ಷೇತ್ರದ ಮಣ್ಣೂರ, ಉಚಗಾಂವ ಹಾಗೂ ಗೋಜಗಾ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ನಿರ್ಮಾಣದ ಕಾಮಗಾರಿಗಳನ್ನು ಮಂಗಳವಾರ ಪರಿಶೀಲಿಸಿದ ಅವರು, ‘ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು. ಗುಣಮಟ್ಟ ಕಾಯ್ದುಕೊಳ್ಳಬೇಕು’ ಎಂದು ತಾಕೀತು ಮಾಡಿದರು.

‘ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿ ನನ್ನ ಬದ್ಧತೆ. ನಿಗದಿತ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ. ಅತಿವೃಷ್ಟಿ, ಕೋವಿಡ್‌ನಂತಹ ಪ್ರಕೃತಿಯ ಅಸಹಕಾರದಿಂದಾಗಿ ಸ್ವಲ್ಪಮಟ್ಟಿಗೆ ಅಡೆತಡೆ ಉಂಟಾಗಿದೆ. ಆದರೆ, ನನ್ನ ಗುರಿ ಮತ್ತು ಯೋಜನೆಯಲ್ಲಿ ಹಿಂದಡಿ ಇಡುವ ಪ್ರಶ್ನೆಯೇ ಇಲ್ಲ. ಕ್ಷೇತ್ರದ ಜನರ ಸಹಕಾರವೂ ಸಂಪೂರ್ಣವಾಗಿ ಸಿಗುತ್ತಿದೆ. ಹಿಂದೆಂದೂ ಕಾಣದ ರೀತಿಯಲ್ಲಿ ಕ್ಷೇತ್ರ ಅಭಿವೃದ್ಧಿಗೊಳ್ಳುತ್ತಿರುವುದರಿಂದ ಜನರು ನೆಮ್ಮದಿ ಕಾಣುತ್ತಿದ್ದಾರೆ’ ಎಂದರು.

‘ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ, ಇತಿಹಾಸದಲ್ಲೇ ಮೊದಲ ಬಾರಿಗೆ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿದ್ದಾರೆ. ಜನರು ಅಭಿವೃದ್ಧಿ ಪರವಾಗಿದ್ದಾರೆ ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ. ಪರಸ್ಪರ ಸಹಕಾರದಿಂದ ಇದೇ ರೀತಿ ಅಭಿವೃದ್ಧಿಯತ್ತ ಮುನ್ನಡೆಯೋಣ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.