ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಕಟ್ಟಡಗಳು ಕಳಪೆಯಾದರೆ ಕಠಿಣ ಕ್ರಮ: ಲಕ್ಷ್ಮಿ ಎಚ್ಚರಿಕೆ

Last Updated 22 ಅಕ್ಟೋಬರ್ 2020, 14:45 IST
ಅಕ್ಷರ ಗಾತ್ರ

ಬೆಳಗಾವಿ: ‘ಶಾಲೆಗಳ ಕಟ್ಟಡಗಳು ಅತ್ಯಂತ ಸುಸಜ್ಜಿತವಾಗಿ ನಿರ್ಮಾಣವಾಗಬೇಕು. ಕಳಪೆ ಕಾಮಗಾರಿ ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಎಚ್ಚರಿಕೆ ನೀಡಿದರು.

ಗ್ರಾಮೀಣ ಕ್ಷೇತ್ರದ ವಾಘವಾಡೆ ಗ್ರಾಮದ ಮರಾಠಿ ಹಿರಿಯ ಪ್ರಾಥಮಿಕ ಸರ್ಕಾರಿ ಶಾಲೆಯ ಎರಡು ನೂತನ ಕೊಠಡಿಗಳನ್ನು ಉದ್ಘಾಟಿಸಿ ಹಾಗೂ ಗ್ರಾಮದ ಕನ್ನಡ ಹಿರಿಯ ಪ್ರಾಥಮಿಕ ಸರ್ಕಾರಿ ಶಾಲೆಗೆ ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿಗೆ ಗುರುವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಶಾಲೆಗಳು ಮಕ್ಕಳ ಭವಿಷ್ಯ ರೂಪಿಸುವ ತಾಣಗಳು. ಅಲ್ಲಿ ನಿರಾತಂಕವಾಗಿ ಮತ್ತು ನಿಷ್ಠೆ, ಭಕ್ತಿಯಿಂದ ಮಕ್ಕಳು ಕಲಿಯುವಂತಹ ವಾತಾವರಣವಿರಬೇಕು. ಕ್ಷೇತ್ರದಲ್ಲಿ ನೂರಾರು ಶಾಲೆಗಳಿಗೆ ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸುವ ಕಾರ್ಯವನ್ನು ಕೈಗೆತ್ತಿಕೊಂಡಿದ್ದೇನೆ. ಎಲ್ಲಿಯೂ ಕಟ್ಟಡ ಮತ್ತು ಕೊಠಡಿಯ ಕೊರತೆ ಆಗಬಾರದು. ಯಾವುದೇ ಮಕ್ಕಳು ಶಾಲೆಯಿಂದ ಹೊರಗುಳಿಯಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಗ್ರಾಮಸ್ಥರು ಎಲ್ಲ ರೀತಿಯ ಸಹಕಾರ ನೀಡಬೇಕು’ ಎಂದರು.

ಗ್ರಾಮದ ಹಿರಿಯರು, ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಜುಟ್ಟನವರ, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT