ಸೋಮವಾರ, ಸೆಪ್ಟೆಂಬರ್ 26, 2022
24 °C

‘ಮಂದಿರಕ್ಕೆ ₹ 25 ಲಕ್ಷ ಮಂಜೂರು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಂಬ್ರಾ: ಇಲ್ಲಿನ ಬಸವೇಶ್ವರ ಮಂದಿರ ನಿರ್ಮಾಣಕ್ಕಾಗಿ ₹25 ಲಕ್ಷ ಮಂಜೂರು ಮಾಡಿಸಿದ್ದು, ಮಂದಿರ ನಿರ್ಮಾಣ ಕಾರ್ಯ ಶೀಘ್ರ ಆರಂಭವಾಗಲಿದೆ ಎಂದು ಶಾಸಕಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದರು.

ಗ್ರಾಮದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ದೇವಸ್ಥಾನದ ರೂಪುರೇಷೆ ಕುರಿತಂತೆ ಗ್ರಾಮದ ಹಿರಿಯರು, ಮಹಿಳೆಯರು, ಭಕ್ತರೊಂದಿಗೆ ಚರ್ಚಿಸಿದರು.

ಗ್ರಾಮಸ್ಥರ ಆಶಯದಂತೆ ಹಣ ಮಂಜೂರು ಮಾಡಿಸಲಾಗಿದೆ. ಇದಕ್ಕೆ ಎಲ್ಲ ರೀತಿಯ ಸಹಕಾರ ನೀಡಬೇಕು ಎಂದರು.

ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮುಖಂಡರಾದ ನಾಗೇಶ ದೇಸಾಯಿ, ಈರಪ್ಪ ಸುಳೇಭಾವಿ, ಸದು ಪಾಟೀಲ, ಶಿವಾಜಿ ದೇಸಾಯಿ, ಲಕ್ಷ್ಮಣ ಕೊಳೆಪ್ಪಗೋಳ, ಮಹೇಶ ಕುಲಕರ್ಣಿ, ಪ್ರಶಾಂತ ಗಿರಿಮಲ್, ಸಂತೋಷ ದೇಸಾಯಿ, ಗುರುನಾಥ ಅಷ್ಟೇಕರ್, ಖಯೂಮ್‌ ಅತ್ತಾರ, ಉಲ್ಲಾಸ ಬೊಮ್ಮನವಾಡಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು