ಶುಕ್ರವಾರ, ಡಿಸೆಂಬರ್ 4, 2020
21 °C

ವಿದ್ಯಾಭ್ಯಾಸಕ್ಕೆ ಹೆಚ್ಚಿನ ಸಮಯ ಮೀಸಲಿಡಿ: ಲಕ್ಷ್ಮೀ ಹೆಬ್ಬಾಳ್ಕರ್‌ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಸಮಯ ಮೀಸಲಿಡಬೇಕು. ಉತ್ತಮ ನಾಗರಿಕರಾಗಿ ಬದುಕಲು ಭದ್ರ ಬುನಾದಿ ಹಾಕಿಕೊಳ್ಳಬೇಕು’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸಲಹೆ ನೀಡಿದರು.

ಗ್ರಾಮೀಣ ಕ್ಷೇತ್ರದ ಖನಗಾಂವ ಕೆ.ಎಚ್. ಗ್ರಾಮದಲ್ಲಿ‌ ಮಹಾತ್ಮ ಜ್ಯೋತಿಬಾ ಫುಲೆ ಪ್ರತಿಷ್ಠಾನದಿಂದ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ‍ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿ ಜೀವನ ಅತ್ಯಂತ ಪ್ರಮುಖ ಘಟ್ಟವಾಗಿದೆ. ಹೀಗಾಗಿ, ಸಮಯವನ್ನು ಅನಗತ್ಯವಾಗಿ ವ್ಯರ್ಥ ಮಾಡಬಾರದು’ ಎಂದರು.

‘ಸಾಮಾಜಿಕ, ರಾಜಕೀಯ ಮೊದಲಾದ ವ್ಯವಸ್ಥೆಯಲ್ಲಿ ಯುವ ಜನರು ಪ್ರಮುಖ ಪಾತ್ರ ವಹಿಸಬೇಕು. ಆಗ ಮಾತ್ರ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಾಧ್ಯ’ ಎಂದು ಹೇಳಿದರು.

ಪ್ರತಿಷ್ಠಾನದ ಅಧ್ಯಕ್ಷ ಜ್ಯೋತಿಬಾ ಪಾಟೀಲ, ಮುಖಂಡರಾದ ಮಲ್ಲಪ್ಪ ಗಿರಿಯಾಳಕರ, ಬಾಳು ಗಿರಿಯಾಳಕರ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು