ರಾಯಬಾಗ: ‘ತಾಲ್ಲೂಕಿನ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸುವ ಮೂಲಕ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ’ ಎಂದು ಶಾಸಕ ಮಹೇಂದ್ರ ತಮ್ಮಣ್ಣವರ ಹೇಳಿದರು.
ತಾಲ್ಲೂಕಿನ ನಿಡಗುಂದಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ₹5ಲಕ್ಷ ಹಾಗೂ ಸರಕಾರಿ ಪ್ರಾಥಮಿಕ ಶಾಲೆ ಸಿದ್ದೇಶ್ವರ ನಗರದಲ್ಲಿ ₹4 ಲಕ್ಷ ಅನುದಾನದಲ್ಲಿ ಮಂಜೂರಾದ ನೂತನ ಶೌಚಾಲಯಗಳ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.
ಕ್ಷೇತ್ರದ ಸರ್ವಾಂಗೀಣ ಬೆಳವಣಿಗೆಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ಕುಡಚಿ ಮತಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ ಹಾಲ್ಗುಣಿ, ರಾಮಾ ಹಿರೇಕೊಡಿ, ಅರುಣ ಟಕ್ಕಣ್ಣವರ, ಪುಟ್ಟರಾಜ ಗವಾಣಿ, ಶಂಕರ ಹಿರೇಕೊಡಿ, ಮಾಯಪ್ಪ ಹಿರೇಕೊಡಿ, ಸಾಗರ ಗವಾಣಿ, ಗಜಾನನ ವಡ್ಡರ,ಸಚಿನ ಹಳಕಲ್ ಸೇರಿದಂತೆ ಇತರರು ಇದ್ದರು.