ಬುಧವಾರ, ಮೇ 18, 2022
23 °C

ಬೆಳಗಾವಿ | ಶಾಸಕರೇ ಮೇಯರ್–ಉಪಮೇಯರ್‌ ಆಗಿದ್ದಾರೆ: ಸತೀಶ ವ್ಯಂಗ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸತೀಶ ಜಾರಕಿಹೊಳಿ

ಬೆಳಗಾವಿ: ‘ಇಲ್ಲಿನ ಮಹಾನಗರಪಾಲಿಕೆಯಲ್ಲಿ ಅನಧಿಕೃತ ಮೇಯರ್– ಉಪ ಮೇಯರ್ ಇದಾರೆ. ಅನಧಿಕೃತವಾಗಿ ಅಧಿಕಾರ ನಡೆಸಲು ಸರ್ಕಾರವೇ ಅವಕಾಶ ನೀಡಿದೆ. ಕಾಂಗ್ರೆಸ್ ವತಿಯಿಂದ ಅವರಿಬ್ಬರಿಗೂ ಗೌನ್ ಕೊಡಲಾಗುವುದು. ಅವರೇ ಅಧಿಕಾರ ನಡೆಸಲಿ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬಿಜೆಪಿ ಶಾಸಕರಾದ ಅಭಯ ಪಾಟೀಲ ಮತ್ತು ಅನಿಲ ಬೆನಕೆ ಅವರನ್ನು ಟೀಕಿಸಿದರು.

ಇಲ್ಲಿ ಮೇಯರ್‌ ಆಯ್ಕೆ ವಿಳಂಬದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಆ ಶಾಸಕರ ಕೈಯಲ್ಲಿ ಆಡಳಿತವಿದೆ. ಉಳಿದವರು ಟೀ–ಬಿಸ್ಕತ್ತುಗೆ ಸೀಮಿತವಾಗಿದ್ದಾರೆ’ ಎಂದು ಲೇವಡಿ ಮಾಡಿದರು.

‘ನಗರದಲ್ಲಿ ಖಾಸಗಿ ಸಗಟು ತರಕಾರಿ ಮಾರುಕಟ್ಟೆ ಆರಂಭದಿಂದ ರೈತರಿಗೆ ತೊಂದರೆ ಉಂಟಾಗುತ್ತಿದ್ದು, ಇದನ್ನು ತಡೆಗಟ್ಟಲು ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ. ಆದರೆ, ಆ ಮಾರುಕಟ್ಟೆ ಪರವಾಗಿ ಸರ್ಕಾರವೇ ನಿಂತಿದೆ. ಅದನ್ನು ಸರ್ಕಾರವೇ ತಡೆಗಟ್ಟಬೇಕು’ ಎಂದು ಒತ್ತಾಯಿಸಿದರು.

‘ಗೋವಾದಲ್ಲಿ ಚುನಾವಣಾ ಉಸ್ತುವರಿ ದಿನೇಶ್‌ ಗುಂಡೂರಾವ್‌ ನೇತೃತ್ವದಲ್ಲಿ ನಮ್ಮ ‍ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸುವಂತೆ ಮಾಡಲು ತಯಾರಿ ನಡೆಸಿದ್ದೇವೆ. ನಾನು ಇಪ್ಪತ್ತು ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ನಡೆಸುತ್ತೇನೆ’ ಎಂದು ತಿಳಿಸಿದರು.

ಪಕ್ಷದ ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಮುಖಂಡರಾದ ಎ.ಬಿ. ಪಾಟೀಲ, ಸುಶೀಲ ಬೆಳಗಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು