ಬುಧವಾರ, ಆಗಸ್ಟ್ 21, 2019
22 °C

ಬೆಳೆ ಹಾನಿ ವೀಕ್ಷಿಸಿದ ಶಾಸಕ ಸತೀಶ ಜಾರಕಿಹೊಳಿ

Published:
Updated:
Prajavani

ಬೆಳಗಾವಿ: ತಾಲ್ಲೂಕಿನ ಹುದಲಿ, ಮುಚ್ಚಂಡಿ ಗ್ರಾಮಗಳಲ್ಲಿ ಮಳೆಯಿಂದ ಆಗಿರುವ ಹಾನಿಯನ್ನು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಸೋಮವಾರ ವೀಕ್ಷಿಸಿದರು. ಸ್ಥಳೀಯರಿಗೆ ಸಾಂತ್ವನ ಹೇಳಿದರು.

‘ಇಲ್ಲಿ ಈ ಬಾರಿ ಸಾಕಷ್ಟು ಮಳೆಯಾದ ಪರಿಣಾಮ ಹೊಲ–ಗದ್ದೆಗಳಲ್ಲಿ ಅಪಾರ ಪ್ರಮಾಣದ ನೀರು ನುಗ್ಗಿದ್ದು, ಬಡ ಜನರ ಬದುಕು ತತ್ತರಿಸಿದೆ. ಹೀಗಾಗಿ, ಮುಂದಿನ ವರ್ಷಗಳಲ್ಲಿ ಮಳೆಗೆ ಮುನ್ನವೇ ಎಚ್ಚರಿಕೆ ವಹಿಸುವಂತೆ ಹಾಗೂ ಜಮೀನುಗಳಿಗೆ ನೀರು ನುಗ್ಗದಂತೆ ನೋಡಿಕೊಳ್ಳಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹಾನಿಗೊಳಗಾದ ಕುಟುಂಬಗಳಿಗೆ ಸೂಕ್ತ ಪರಿಹಾರ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಹುದಲಿ ಕ್ಷೇತ್ರದ ಸದಸ್ಯೆ ಯಲ್ಲವ್ವ ಬುಡ್ರಿ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ, ಎಪಿಎಂಸಿ‌ ಅಧ್ಯಕ್ಷ ಆನಂದ ಪಾಟೀಲ ಇದ್ದರು.

Post Comments (+)