ಬೆಳಗಾವಿ: ‘ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಬೇಕು’ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಕೋರಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ನಡೆದ ಜಿಲ್ಲಾ ಹಾಲು ಒಕ್ಕೂಟ, ಡಿಸಿಸಿ ಬ್ಯಾಂಕ್ ಮತ್ತು ಜಿಲ್ಲಾ ಸಹಕಾರಿ ಒಕ್ಕೂಟದ ನಿರ್ದೇಶಕರ ಸಭೆಯಲ್ಲಿ ಅವರು ಮಾತನಾಡಿದರು.

‘ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಇದು ಬಿಜೆಪಿ–ಕಾಂಗ್ರೆಸ್ ನಡುವಿನ ಚುನಾವಣೆಯಾಗಿದೆ. ಕೆಲವರು ಏನೇನೋ ಬಣ್ಣ ಬಳಿಯುತ್ತಿದ್ದಾರೆ. ಇದು ವ್ಯಕ್ತಿಗಳ ನಡುವಿನ ಚುನಾವಣೆಯಲ್ಲ. ಪಕ್ಷ-ಪಕ್ಷಗಳದ್ದು’ ಎಂದರು.

‘ಈ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಮಾತ್ರ ನಮ್ಮ ಪಕ್ಷಕ್ಕೆ ಅನುಕೂಲವಾಗಲಿದೆ. ಆದ್ದರಿಂದ ಎಲ್ಲ ಸ್ಥಳೀಯ ಸಂಸ್ಥೆಗಳ ಸದಸ್ಯರನ್ನು ನೇರವಾಗಿ ಸಂಪರ್ಕಿಸಿ ಅಭ್ಯರ್ಥಿ ಗೆಲುವಿಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.

‘ಹಿಂದಿನ ವಿಧಾನಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ವಿವೇಕರಾವ್ ಪಾಟೀಲ ಅವರು ಈ ಬಾರಿ ನಮ್ಮ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದಾರೆ’ ಎಂದರು.

ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ವಿವೇಕರಾವ್ ಪಾಟೀಲ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ ಢವಳೇಶ್ವರ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಸಗೌಡ ಪಾಟೀಲ(ಮೆಳವಂಕಿ) ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.