ಶನಿವಾರ, ಜನವರಿ 22, 2022
16 °C

ಮತದಾರರಿಗೆ ತರಬೇತಿ: ಸೂಚನೆ

ಪ್ರಜಾವಾಣಿ ವಾರ್ತೆ ‌‌ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ವಿಧಾನಪರಿಷತ್ ಚುನಾವಣೆಯಲ್ಲಿ ಅರ್ಹ ಮತದಾರರಿಗೆ ಹಕ್ಕು ಚಲಾವಣೆ ಕುರಿತು ಸೂಕ್ತ ತರಬೇತಿಯನ್ನು ಕಡ್ಡಾಯವಾಗಿ ಹಮ್ಮಿಕೊಳ್ಳಬೇಕು’ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ್ ಸೂಚನೆ ನೀಡಿದರು.

ಇಲ್ಲಿ ಗುರುವಾರ ನಡೆದ ವಿಡಿಯೊ ಸಂವಾದದಲ್ಲಿ ಮಾತನಾಡಿ, ‘ಈ ಚುನಾವಣೆಯಲ್ಲಿ ಪ್ರಾಶಸ್ತ್ಯದ ಮತಗಳಿರುವುದರಿಂದ ಮತದಾನ ಪ್ರಕ್ರಿಯೆ ಭಿನ್ನವಾಗಿರುತ್ತದೆ. ಆದ್ದರಿಂದ ತರಬೇತಿ ಅಗತ್ಯವಿದೆ’ ಎಂದರು.

‘ಪ್ರಾಶಸ್ತ್ಯದ ಮತ ಇರುವುದರಿಂದ ಮತ ಚಲಾವಣೆಯಲ್ಲಿ ಯಾವುದೇ ಲೋಪಗಳಾದರೆ ಆ ಮತವನ್ನು ಅಸಿಂಧು ಅಥವಾ ತಿರಸ್ಕೃತ ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಈ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಬೇಕು ಮತ್ತು ಪ್ರಾಯೋಗಿಕವಾಗಿ ಮತಚಲಾವಣೆ ಬಗ್ಗೆ ತರಬೇತಿ ನೀಡಬೇಕು. ಈ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ತಿಳಿಸಿದರು.

‘ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ಸುಗಮವಾಗಿ ನಡೆಸುವ ಉದ್ದೇಶದಿಂದ ಮೈಕ್ರೋ ಅಬ್ಸರ್ವರ್‌ಗಳನ್ನು ನೇಮಿಸಲಾಗಿದೆ. ಪ್ರತಿ ಮತಗಟ್ಟೆಯಲ್ಲಿ ವಿಡಿಯೊ ಚಿತ್ರೀಕರಣಕ್ಕೆ ಕ್ರಮ ವಹಿಸಲಾಗಿದೆ’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರಪ್ಪ ವಣಕ್ಯಾಳ, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ, ಚುನಾವಣಾ ತರಬೇತುದಾರ ಎನ್.ವಿ. ಶಿರಗಾಂವಕಾರ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು