ಬುಧವಾರ, ಜನವರಿ 19, 2022
26 °C

ಚುನಾವಣೆ: ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

ಪ್ರಜಾವಾಣಿ ವಾರ್ತೆ ‌‌ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇದೇ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಇಲ್ಲಿನ ಜ್ಯೋತಿ ಕಾಲೇಜಿನಲ್ಲಿ ಭಾನುವಾರ ತರಬೇತಿ ನೀಡಲಾಯಿತು.

ತರಬೇತುದಾರರಾದ ನಾಗರಾಜ ಮರೆಣ್ಣವರ, ಮತದಾನದ ಮುನ್ನಾ ದಿನವಾದ ಡಿ.9ರ ಬೆಳಿಗ್ಗೆ 10 ಗಂಟೆಯಿಂದ ಮತದಾನ ದಿನವಾದ ಡಿ.10ರ ಸಂಜೆ 4ರವರೆಗೆ ಅಂದರೆ ಮತದಾನ‌ ಕೊನೆಗೊಳ್ಳುವ ಅವಧಿಯವರೆಗೆ ಮತಗಟ್ಟೆ ಅಧಿಕಾರಿಗಳು ನಿರ್ವಹಿಸಬೇಕಾದ ಕರ್ತವ್ಯಗಳು ಮತ್ತು ಕೆಲಸ ಕಾರ್ಯಗಳ ವಿಧಾನವನ್ನು ತಿಳಿಸಿಕೊಟ್ಟರು.

ಮತಗಟ್ಟೆಗೆ ತೆರಳುವ ಮುಂಚೆ ಮತಪೆಟ್ಟಿಗೆಗಳು, ಮತದಾರರ ಪಟ್ಟಿ ಸೇರಿದಂತೆ ಚೆಕ್‌ಲಿಸ್ಟ್ ಪ್ರಕಾರ ಎಲ್ಲ ಅಗತ್ಯ ಸಾಮಗ್ರಿಗಳನ್ನು ಪಡೆದುಕೊಳ್ಳಬೇಕು. ಮತದಾನ ಆರಂಭಗೊಳ್ಳುವ ಮುಂಚೆ ಏಜೆಂಟರ ಸಮ್ಮುಖದಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಮತಪೆಟ್ಟಿಗೆ ಸಿದ್ಧತೆ ಮಾಡಿಕೊಳ್ಳುವುದು ಸೇರಿದಂತೆ ಮತದಾನ ಮುಕ್ತಾಯದವರೆಗೆ ಪಾಲಿಸಬೇಕಾದ ನಿಯಮಗಳನ್ನು  ವಿವರಿಸಿದರು.

ತಹಶೀಲ್ದಾರ್‌ ಆರ್.ಕೆ. ಕುಲಕರ್ಣಿ, ಮತಗಟ್ಟೆಗಳ ಪಿಆರ್‌ಒ ಹಾಗೂ ಎಪಿಆರ್‌ಒಗಳು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು