ಶುಕ್ರವಾರ, ಏಪ್ರಿಲ್ 3, 2020
19 °C
‘ಯುವ ಅಣಕು ಸಂಸತ್ ’ ಸ್ಪರ್ಧೆ

ಕೌಶಲ ವೃದ್ಧಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ವಿದ್ಯಾರ್ಥಿಗಳು ಕೌಶಲ ವೃದ್ಧಿಸಿಕೊಳ್ಳಬೇಕು. ವಿಷಯವನ್ನು ಪರಿಣಾಮಕಾರಿಯಾಗಿ ಅಭಿವ್ಯಕ್ತಪಡಿಸುವ ಜ್ಞಾನ ಗಳಿಸಿಕೊಳ್ಳಬೇಕು’ ಎಂದು ಕಾನೂನು ಇಲಾಖೆಯ ಕಾರ್ಯದರ್ಶಿ ಹನುಮಂತ ಚನ್ನಣ್ಣವರ ಸಲಹೆ ನೀಡಿದರು.

ಇಲ್ಲಿನ ಕೆಎಲ್‌ಇ ಸಂಸ್ಥೆಯ ರಾಜಾ ಲಖಮಗೌಡ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಪದವಿ ಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಮತ್ತು‌ ರಾಜಾ ಲಖಮಗೌಡ ಪದವಿ ಪೂರ್ವ ವಿಜ್ಞಾನ ಕಾಲೇಜಿನ ಸಹಯೋಗದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಯುವ ಅಣಕು ಸಂಸತ್’ ಸ್ಪರ್ಧೆ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಯುವಜನರು ಅತ್ಯುತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು. ರಾಜಕೀಯ ಅನುಭವ ಪಡೆದುಕೊಳ್ಳಬೇಕು’ ಎಂದರು.

ರಾಜಾ ಲಖಮಗೌಡ ವಿಜ್ಞಾನ ಕಾಲೇಜಿನ ಪ್ರಾಚಾರ್ಯ ಡಾ.ವಿ.ಡಿ. ಯಳಮಲಿ ಮಾತನಾಡಿ, ‘ಮಾತುಗಳನ್ನು ಅರ್ಥೈಸಿಕೊಳ್ಳುವುದು ಒಂದು ಕಲೆ. ಪ್ರಚಲಿತ ವಿಷಯಗಳನ್ನು ಪ್ರಬುದ್ಧವಾಗಿ ಮಂಡಿಸುವ ಕಲೆ ಬೆಳೆಸಿಕೊಳ್ಳಬೇಕು. ಒಂದೇ ವಿಷಯವನ್ನು ತರ್ಕಬದ್ಧವಾಗಿ ಮಂಡಿಸಬೇಕು ಮತ್ತು ವಿವಿಧ ಪರಿಕಲ್ಪನೆಗಳ ಮೂಲಕ ವ್ಯಕ್ತಪಡಿಸಬೇಕು. ವಿಷಯಗಳನ್ನು ನಿಖರವಾಗಿ ಆಳಕ್ಕೆ ಹೋಗಿ ಮಾತನಾಡುವುದನ್ನು ರೂಢಿಸಿಕೊಳ್ಳಬೇಕು. ಕೌಶಲ ಪಡೆಯುವದಕ್ಕೆ ಪರಿಶ್ರಮ ಬೇಕಾಗುತ್ತದೆ. ಆಗ, ಮಾತ್ರ ವ್ಯವಸ್ಥಿತವಾಗಿ ಮಾತನಾಡುವ ಕಲೆ ಸಿದ್ಧಿಯಾಗುತ್ತದೆ’ ಎಂದು ತಿಳಿಸಿದರು.

ಡಿಡಿಪಿಯು ರಾಜಶೇಖರ ಎನ್. ಪಟ್ಟಣಶೆಟ್ಟಿ ಮಾತನಾಡಿ, ‘ಶಾಸನಗಳನ್ನು ರೂಪಿಸುವಾಗ ಚಿಂತನ-ಮಂಥನ ಮಾಡಬೇಕಾಗುತ್ತದೆ. ಶಾಸನಗಳಿಂದ ಸಾಮಾನ್ಯರ ಸಮಸ್ಯೆಗಳು ಪರಿಹಾರವಾಗಬೇಕು. ಯು ಪೀಳಿಗೆಗೆ ರಾಜಕಾರಣ ಅನುಕರಣೀಯವಾಗಬೇಕು. ರಾಜಧರ್ಮ ಪಾಲಿಸಬೇಕು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಸ್.ಜಿ. ನಂಜಪ್ಪನವರ, ‘ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವ ಹೆಚ್ಚಿಸಿಕೊಳ್ಳಲು ಇಂತಹ ವೇದಿಕೆಗಳ ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

ಮತದಾರರ ಸಾಕ್ಷರತಾ ಕ್ಲಬ್‌ ಜಿಲ್ಲಾ ನೋಡಲ್ ಅಧಿಕಾರಿ ಮಲಿಕ್‌ ಮುಲ್ಲಾ ಮಾತನಾಡಿದರು. ಅಪೂರ್ವಾ ಕರಿಕಟ್ಟಿ, ಎನ್.ಆರ್. ಚಮಕೇರಿ ಸ್ವಾಗತಿಸಿದರು. ಎಸ್.ಬಿ. ಬನ್ನಿಮಟ್ಟಿ ನಿರೂಪಿಸಿದರು. ಎ.ಪಿ. ಕರಿಕಟ್ಟಿ ವಂದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು