‘ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ’

ಗುರುವಾರ , ಏಪ್ರಿಲ್ 25, 2019
27 °C

‘ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ’

Published:
Updated:

ಬೆಳಗಾವಿ: ‘ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ’ ಎಂದು ಕೇಂದ್ರ ಸಚಿವ ಹರ್ಷವರ್ಧನ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ದೊರೆಯಲಿದೆ. ಪ್ರಪಂಚದ 20 ದೇಶಗಳಲ್ಲಿ ಚುನಾವಣೆ ನಡೆಯುತ್ತಿವೆ. ಆದರೆ, ವಿಶ್ವದ ಗಮನವೆಲ್ಲಾ ಭಾರತದ ಚುನಾವಣೆಯತ್ತಲೇ ಇದೆ. ಇದಕ್ಕೆ ಮೋದಿ ಹಾಗೂ ಅವರು ನೀಡಿದ ಜನಪರ ಯೋಜನೆಗಳೇ ಕಾರಣ’ ಎಂದು ಹೇಳಿದರು.

‘ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರಫೇಲ್, ಬಿ.ಎಸ್. ಯಡಿಯೂರಪ್ಪ ಬರೆದಿದ್ದಾರೆ ಎನ್ನಲಾದ ಡೈರಿ ವಿಚಾರಗಳು ಅಪ್ರಸ್ತುತ. ಇವುಗಳ ಬಗ್ಗೆ ಮಾತನಾಡಿ ಸಮಯ ಹಾಳು ಮಾಡಿಕೊಳ್ಳುವುದಿಲ್ಲ. ಚುನಾವಣೆಯಲ್ಲಿ ಗೆಲುವಿನತ್ತ ಗಮನಹರಿಸುತ್ತೇವೆ’ ಎಂದು ಪ್ರತಿಕ್ರಿಯಿಸಿದರು.

‘ಮೋದಿ ಕರ್ನಾಟಕದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವುದು ಊಹಾಪೋಹ’ ಎಂದರು.

ಬರಹ ಇಷ್ಟವಾಯಿತೆ?

 • 37

  Happy
 • 3

  Amused
 • 2

  Sad
 • 0

  Frustrated
 • 5

  Angry

Comments:

0 comments

Write the first review for this !